ವಿರಾಜಪೇಟೆ ನ.15 NEWS DESK : ವಿರಾಜಪೇಟೆಯ ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಿತಿಮತಿ ಪಿ ಎಂ ಶ್ರೀ ಸರ್ಕಾರಿ ಶಾಲೆಗೆ ಭೇಟಿ ನೀಡಿ ಅಲ್ಲಿನ ಮಕ್ಕಳ ಜೊತೆಗೂಡಿ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೊಡುವುದು ಮತ್ತು ಹಂಚಿಕೊಳ್ಳುವ ಕಲೆಯ ಮಹತ್ವವನ್ನು ತಿಳಿಸಿಕೊಡಲಾಯಿತು. ಪಿ ಎಂ ಶ್ರೀ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಆಡಳಿತ ಮಂಡಳಿಯ ವತಿಯಿಂದ ನರ್ಸರಿ, ಎಲ್ ಕೆ ಜಿ ,ಯುಕೆಜಿ, ಮಕ್ಕಳಿಗೆ ಬರೆಯಲು ಅನುಕೂಲವಾಗುವಂತಹ ವಸ್ತುಗಳನ್ನು ಜೊತೆಗೆ ಶಾಲೆಗೆ ಜಮಖಾನೆ, ಡಿಕ್ಷನರಿ ಇತ್ಯಾದಿ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪೂಜಾ ಸಜೇಶ್, ಮಕ್ಕಳ ದಿನಾಚರಣೆಯನ್ನು ಪರಸ್ಪರ ಎರಡು ಶಾಲೆಯ ಮಕ್ಕಳು ಜತೆಗೂಡಿ ಸಂಭ್ರಮದಿಂದ ಆಚರಿಸಿದ್ದೇವೆ. ಮಕ್ಕಳಲ್ಲಿ ಪರಸ್ಪರ ಸ್ನೇಹ, ಸಹಕಾರ, ಭ್ರಾತೃತ್ವ ಭಾವನೆ ಮೂಡಿದಾಗ ಮಾತ್ರ ಮೌಲ್ಯಯುತ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ ಎಂದರು. ಮಕ್ಕಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಲಿಟಲ್ ಸ್ಕಾಲರ್ಸ್ ವಿದ್ಯಾಸಂಸ್ಥೆಯ ವತಿಯಿಂದ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ತಿತಿಮತಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಪಾರ್ವತಿ, ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಕಾರ್ಯದರ್ಶಿ ಪ್ರತಿಮಾ ರಂಜನ್, ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮೇಲ್ವಿಚಾರಕರಾದ ರಿಚರ್ಡ್, ಎರಡು ಶಾಲೆಗಳ ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











