ವಿರಾಜಪೇಟೆ ನ.15 NEWS DESK : ಅರಮೇರಿಯ ಎಸ್ಎಂಎಸ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪಂಡಿತ್ ಜವಾಹರ ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪ್ರಾಂಶುಪಾಲೆ ಬಲ್ಲಚಂಡ ಕುಸುಮ್ ಟಿಟೋ ಪುಷ್ಪ ನಮನ ಸಲ್ಲಿಸಿ ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು. ವಿದ್ಯಾರ್ಥಿಗಳಿಗೆ ಮೈಂಡ್ ಅಂಡ್ ಮ್ಯಾಟರ್ಸ್ ಸಂಸ್ಥೆಯ ವತಿಯಿಂದ ಮಾನಸಿಕ ಆರೋಗ್ಯದ ಕುರಿತಾಗಿ ಕಾರ್ಯಾಗಾರವನ್ನು ನಡೆಸಲಾಯಿತು. ಇನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಸಂಸ್ಥೆಯ ಶಿಕ್ಷಕಿ ಹೇಮಾವತಿ ಮಕ್ಕಳ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭ ಗೈಡ್ ಕ್ಯಾಪ್ಟನ್ ಮೈಥಿಲಿ ರಾವ್, ಶಿಕ್ಷಕರುಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











