Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆಯಲ್ಲಿ ಪೋಷಕರ-ಉಪನ್ಯಾಸಕರ ಮಹಾಸಭೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರೊಂದಿಗೆ ಪೋಷಕರ ಜವಬ್ದಾರಿ ಅತಿ ಮುಖ್ಯ : ಶಶಿಧರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆಯಲ್ಲಿ ಪೋಷಕರ-ಉಪನ್ಯಾಸಕರ ಮಹಾಸಭೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರೊಂದಿಗೆ ಪೋಷಕರ ಜವಬ್ದಾರಿ ಅತಿ ಮುಖ್ಯ : ಶಶಿಧರ್*

ನವೆಂಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ನ.15 NEWS DESK : ಮಕ್ಕಳಿಗೆ ಸೃಜನಶೀಲ ಚಟುವಟಿಕೆಗಳೊಂದಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸಿ, ನವೀನ ವಿಧಾನಗಳನ್ನು ಪರಿಚಯಿಸಿ ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಪ್ರೋತ್ಸಾಹಿಸಬೇಕು ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೋಷಕರ ಮತ್ತು ಉಪನ್ಯಾಸಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರೊಂದಿಗೆ ಪೋಷಕರ ಜವಬ್ದಾರಿ ತುಂಬ ಮಹತ್ವದಾಗಿದೆ. ಮಕ್ಕಳು ಮೊಬೈಲ್ ಗೀಳು ಬೆಳೆಸಿಕೊಳ್ಳದಂತೆ ಎಚ್ಚರಿಕೆ ವಹಿಸಿ, ಮೊಬೈಲ್ ನಮ್ಮ ಬದುಕು ಎಂಬ ವ್ಯಸನ ಆಗಬಾರದು. ಈ ಬಗ್ಗೆ ಮಕ್ಕಳಿಗೆ ತಿಳುವಳಿಕೆ ನೀಡಬೇಕು. ಸೃಜನಶೀಲ ಚಟುವಟಿಕೆಗಳಿಗೆ ಪ್ರೇರಣೆ ನೀಡಬೇಕು. ಅವರಲ್ಲಿರುವ ಸೂಪ್ತ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಒದಗಿಸಿಕೊಡಬೇಕು ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎಲ್.ಚಿದಾನಂದ ಕುಮಾರ್ ಮಾತನಾಡಿ,ಸರ್ಕಾರಿ ಶಾಲೆ ಓದಿದ ಬಹುತೇಕ ಮಂದಿ ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ಅಲಂಕರಿಸಿದ್ದಾರೆ.ಎಲ್ಲಾ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಪ್ರತಿಭಾವಂತ ಶಿಕ್ಷಕರು, ಉಪನ್ಯಾಸಕರು ಇದ್ದಾರೆ. ಜೊತೆಗೆ ಸರ್ಕಾರ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸುತ್ತಿದೆ. ಇದು ನಿಮ್ಮ ಶಾಲೆ ನಮ್ಮ ಜವಬ್ದಾರಿ ಏನು ಎಂಬುದನ್ನು ಪೋಷಕರು ಮನಗಣಬೇಕು. ಸರ್ಕಾರಿ ಶಾಲಾ,ಕಾಲೇಜುಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳಲ್ಲಿ ಉತ್ತೇಜನ ತರಬೇಕು.ಅರಿವು‌ಮೂಡಿಸಬೇಕು ಎಂದರು. ಕಾಲೇಜು ಪ್ರಾಂಶುಪಾಲ ಹಂಡ್ರಾಂಗಿ ನಾಗರಾಜು ಮಾತನಾಡಿ, ಮಕ್ಕಳ ಸರ್ವತೋಮುಖ ವಿಕಾಸದಲ್ಲಿ ಶಾಲೆ ಮತ್ತು ಶಿಕ್ಷಕರಷ್ಟೇ ಪಾತ್ರ ಕುಟುಂಬ ಹಾಗೂ ಪಾಲಕರದ್ದು ಎಂಬುದನ್ನು ಮರೆಯಬಾರದು. ಮಗು ಅತಿಹೆಚ್ಚಿನ ಸಮಯವನ್ನು ಪಾಲಕರೊಂದಿಗೆ ಕಳೆಯುವುದರಿಂದ ಮಗುವಿನ ಬಗ್ಗೆ ಹೆಚ್ಚಿನ ವಿಷಯಗಳನ್ನು ಅವರಿಂದ ಶಿಕ್ಷಕರು ತಿಳಿಯಲು ಅಂತೆಯೇ, ಶೈಕ್ಷಣಿಕ ವಿಷಯಗಳು ಮತ್ತು ತಮ್ಮ ಮಗುವಿನ ತರಗತಿಯಲ್ಲಿನ ವರ್ತನೆಯನ್ನು ತಿಳಿಯಲು ಪೋಷಕರಿಗೆ ಇದೊಂದು ಸದಾವಕಾಶ ಎಂದರು. ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ, ಪೋಷಕರಾಗಿ ನಾವು ಮನೆಯಲ್ಲಿ ಹೇಗೆ ನಡೆದುಕೊಳ್ಳುತ್ತೇವೆ ಮತ್ತು ನಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದ ಏನು ಕಲಿಸುತ್ತೇವೆ ಅವರು ಅದನ್ನೇ ನೋಡಿ ತಿಳಿದುಕೊಂಡು ಅಭ್ಯಾಸ ಮಾಡಿಕೊಳ್ಳುತ್ತಾರೆ. ಹೀಗಾಗಿ ಉತ್ತಮ ಮೌಲ್ಯಗಳನ್ನು ಚಿಕ್ಕ ವಯಸ್ಸಿನಿಂದ ಹೇಳಿಕೊಡುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯ ಎಂದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಚ್.ಕೆ.ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು. ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಈರಪ್ಪ ಹಾಗೂ ಪೋಷಕರ ಪಾಲ್ಗೊಂಡಿದ್ದರು. ಉಪನ್ಯಾಸಕ ರಮೇಶ್ ಸಂವಿಧಾನ ಪೀಠಿಕೆ ವಾಚಿಸಿದರು. ಹನುಮರಾಜ್ ವಂದಿಸಿದರು.ಇದೇ ಸಂದರ್ಭ ಕಾಲೇಜಿನಲ್ಲಿ ಅತಿಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ಮಕ್ಕಳ ಪೋಷಕರನ್ನು ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರನ್ನು ಸನ್ಮಾನಿಸಿ ಗೌರವಿಸಲಾಯಿತು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.