ಕುಶಾಲನಗರ ನ.15 NEWS DESK : ಕುಶಾಲನಗರದ ರಥಬೀದಿಯಲ್ಲಿ ನಡೆಯುವ ರಂಗೋಲಿ ಸ್ಪರ್ಧೆಗೆ ತನ್ನದೇ ಆದ ವಿಶೇಷ ಆಕರ್ಷಣೆಯಿದೆ. ಕನ್ನಡ ಸಾಹಿತ್ಯ ಪರಿಷತ್ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ನ.23 ರಂದು ರಂಗೋಲಿ ಸ್ಪರ್ಧೆ ನಡೆಯಲಿದ್ದು, ಆಸಕ್ತರು ಹೆಸರು ನೋಂದಾಯಿಸಿಕೊಳ್ಳಲು ಮನವಿ ಮಾಡಿದೆ. ಮೊದಲು ಬಂದ 70 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಕಸಾಪ ದ ಅಧ್ಯಕ್ಷ ಕೆ.ಎಸ್.ನಾಗೇಶ್ 9986073949 ಅವರಲ್ಲಿ ನೋಂದಾಯಿಸಿಕೊಳ್ಳಲು ಕೋರಿದೆ. ಸ್ಪರ್ಧೆಯ ವಿಜೇತರಿಗೆ ಮೊದಲ ಬಹುಮಾನ 6000, ದ್ವಿತೀಯ, 4000, ತೃತೀಯ 2000 ಮತ್ತು ಆಕರ್ಷಕ ಪಾರಿತೋಷಕಗಳನ್ನು ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು.










