Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆಯಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿ ಸಮಾರೋಪ : ಕ್ರೀಡಾಕೂಟಗಳಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ : ರೆ.ಫಾ.ಮದಲೈ ಮುತ್ತು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆಯಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿ ಸಮಾರೋಪ : ಕ್ರೀಡಾಕೂಟಗಳಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ : ರೆ.ಫಾ.ಮದಲೈ ಮುತ್ತು*

ನವೆಂಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ನ.15 NEWS DESK : ಕ್ರೀಡಾಕೂಟಗಳಿಂದ ಪರಸ್ಪರ ಸಾಮರಸ್ಯ ಬೆಳೆಯುದರ ಜೊತೆಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ವ್ಯಕ್ತಿಯು ಸದೃಢರಾಗಲು ಸಾಧ್ಯ ಎಂದು ವಿರಾಜಪೇಟೆಯ ಸಂತ ಅನ್ನಮ್ಮ ಪಿ.ಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಪದವಿ ಕಾಲೇಜಿನ ವ್ಯವಸ್ಥಾಪಕ ರೆ. ಫಾ. ಮದಲೈ ಮುತ್ತು ಅಭಿಪ್ರಾಯಪಟ್ಟರು. ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಗೋಣಿಕೊಪ್ಪಲಿನ ಕೂರ್ಗ್ ಪಿ ಯು ಕಾಲೇಜಿನ ಸಹಯೋಗದಲ್ಲಿ ಸಂತ ಅನ್ನಮ್ಮ ಕಾಲೇಜಿನ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾಸಂಸ್ಥೆಗಳ ನಡುವೆ ಜರುಗುವ ಕ್ರೀಡಾಕೂಟಗಳಿಂದ ಪರಸ್ಪರ ಸಹಕಾರ, ಅನ್ಯೋನ್ಯತೆ ಬೆಳೆಯುತ್ತದೆ. ಓದಿನ ಜೊತೆಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಕ್ರೀಡಾಕೂಟಗಳು ಭಾಂದವ್ಯದ ಸಂಕೇತಗಳಾಗಿವೆ ಎಂದರು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡಾಸ್ಫೂರ್ತಿಯನ್ನು ಮೆರೆಯಬೇಕು ಎಂದು ಹೇಳಿದರು. ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಶಿಕ್ಷಣದ ಜೊತೆಗೆ ಕ್ರೀಡೆಯು ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಬಲಿಯಾಗದೆ ಎಲ್ಲಾ ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಲು ಕ್ರೀಡೆ ಅತೀ ಪ್ರಮುಖವಾಗಿದೆ ಎಂದರು. ಜಿಲ್ಲಾ ಮಟ್ಟದ ಬಾಲಕಿಯರ ಹ್ಯಾಂಡ್ ಬಾಲ್ ನಲ್ಲಿ ವಿರಾಜಪೇಟೆ ತಾಲ್ಲೂಕು ತಂಡವು ಮಡಿಕೇರಿ ತಾಲ್ಲೂಕು ತಂಡದ ವಿರುದ್ಧ ಫೈನಲ್ ಪಂದ್ಯಾಟದಲ್ಲಿ 6-3 ರ ಅಂತರದಿಂದ ಗೆಲುವನ್ನು ಸಾಧಿಸಿತು. ಬಾಲಕರ ಹ್ಯಾಂಡ್ ಬಾಲ್ ವಿಭಾಗದಲ್ಲಿಯೂ ಸಹ ವಿರಾಜಪೇಟೆ ತಾಲ್ಲೂಕು ತಂಡವು ಫೈನಲ್ ಪಂದ್ಯದಲ್ಲಿ ಮಡಿಕೇರಿ ತಂಡದ ವಿರುದ್ಧ ಸೆಣಸಿ 7-5 ರ ಅಂತರದಿಂದ ಜಯಗಳಿಸಿ ಎರಡು ವಿಭಾಗದಲ್ಲಿಯೂ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು.  ಪಂದ್ಯಾವಳಿಯ ತೀರ್ಪುಗಾರರಾಗಿ ವಿರಾಜಪೇಟೆಯ ಸಂತ ಅನ್ನಮ್ಮ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಬಿ.ವಿ.ರಾಜ ರೈ ಹಾಗೂ ಕೂಡಿಗೆ ಸೈನಿಕ ಶಾಲೆಯ ದೈಹಿಕ ಶಿಕ್ಷಕ ಸೋಹೆಲ್ ಕಾರ್ಯನಿರ್ವಹಿಸಿದರು. ಅತಿಥಿಗಳು ವಿಜೇತ ತಂಡಗಳಿಗೆ ಪಾರಿತೋಷಕ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕಾಪ್ಸ್ ವಿದ್ಯಾಸಂಸ್ಥೆಯ ಕ್ಯಾಂಪಸ್ ಮ್ಯಾನೇಜರ್ ಸೋಮಯ್ಯ, ವಿವಿಧ ಕಾಲೇಜುಗಳ ದೈಹಿಕ ಶಿಕ್ಷಕರುಗಳು, ಕ್ರೀಡಾಪಟು ವಿದ್ಯಾರ್ಥಿಗಳು, ಕಾಪ್ಸ್ ವಿದ್ಯಾಸಂಸ್ಥೆಯ ಉಪನ್ಯಾಸಕರು,ಸಂತ ಅನ್ನಮ್ಮ ಪಿ ಯು ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ರಾಜ್ಯ ಮಟ್ಟದ ಪಂದ್ಯಾವಳಿಯು ಚಿಕ್ಕೋಡಿಯಲ್ಲಿ ಡಿ. 7 ಹಾಗೂ 8 ರಂದು ನಡೆಯಲಿದೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.