ಮಡಿಕೇರಿ ನ.15 NEWS DESK : ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಡಿ ಮಡಿಕೇರಿ ತಾಲ್ಲೂಕಿನಲ್ಲಿ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಯನ್ನು ರಚಿಸಲಾಗಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಧ್ಯಕ್ಷರಾಗಿರುವ ಸಮಿತಿಯ ಉಪಾಧ್ಯಕ್ಷರಾಗಿ ಕರಿಕೆ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಅವರು ಆಯ್ಕೆಯಾಗಿದ್ದಾರೆ.











