ಮಡಿಕೇರಿ ನ.17 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರಿಗಾಗಿ ಕೇಂದ್ರ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆಯಡಿ ಕೇಂದ್ರ ಸರ್ಕಾರದ ಸ್ಟೇಟ್ ಆಕ್ಷನ್ ಪ್ಲಾನ್ ಫಾರ್ ಸೀನಿಯರ್ ಸಿಟಿಜನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಹಿರಿಯ ನಾಗರಿಕರ ಕಾಯ್ದೆ 2007, ಹಿರಿಯ ನಾಗರಿಕರ ಆಸ್ತಿ ಸಂರಕ್ಷಣೆ, ಹಿರಿಯ ನಾಗರಿಕರಿಗೆ ಇರುವ ಸೌಲಭ್ಯಗಳ ಕುರಿತಾಗಿ ಸಾರ್ವಜನಿಕರಿಗೆ ಕಾನೂನು ಅರಿವು ಮತ್ತು ನೆರವು ಶಿಬಿರ ಕಾರ್ಯಕ್ರಮವು ವಿರಾಜಪೇಟೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನವೆಂಬರ್, 18 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ವಿರಾಜಪೇಟೆ ತಾಲ್ಲೂಕಿನ ಹಿರಿಯ ನಾಗರಿಕರು ಕಾರ್ಯಕ್ರಮಕ್ಕೆ ಹಾಜರಾಗಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.










