ಮಡಿಕೇರಿ ನ.18 NEWS DESK : ಕೊಡಗು ಪ್ರೆಸ್ ಕ್ಲಬ್‌ನ ಉಪಾಧ್ಯಕ್ಷರಾಗಿ ಬಿ.ಜಿ.ಮಂಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘಟನಾ ಕಾರ್ಯದರ್ಶಿಯಾಗಿ ಕೆ.ಎಂ.ವಿನೋದ್, ಸಹ ಕಾರ್ಯದರ್ಶಿಯಾಗಿ ಲೋಹಿತ್ ಮಾಗುಲುಮನೆ, ಹಾಗೂ ನಿದೇರ್ಶಕರಾಗಿ ಬಾಚರಣಿಯಂಡ ಅನುಕಾರ್ಯಪ್ಪ, ಮನೋಜ್ ಕುಮಾರ್, ಸ್ಟ್ಯಾನ್ಲಿ.ಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










