ಮಡಿಕೇರಿ ನ.18 NEWS DESK : ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕೇರಿ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ಮತ್ತು ಅರಿವು ಕಾರ್ಯಕ್ರಮ ನಡೆಯಿತು. ಅಂಗನವಾಡಿ ಕೇಂದ್ರದ ಮಕ್ಕಳಿಗೆ ಛದ್ಮವೇಷ ಮತ್ತು ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ವಿವಿಧ ರೀತಿಯ ಸ್ಲೋಗನ್‍ಗಳನ್ನು ಬರೆಸಿ ಮಕ್ಕಳಿಂದ ಗ್ರಾಮಸ್ಥರಿಗೆ ಸ್ವಚ್ಛತೆ ಹಾಗೂ ಪರಿಸರ ರಕ್ಷಣೆ ಬಗ್ಗೆ ಮಾಹಿತಿ ಕೊಡಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ರಕ್ಷಿತ್, ತಾಲೂಕು ಹಿಂದುಳಿದ ವರ್ಗದ ವಿಸ್ತರಣಾಧಿಕಾರಿ ಶ್ರೀಕಾಂತ್, ತಾಲೂಕು ಪಂಚಾಯಿತಿ ಸಾಮಾಜಿಕ ಲೆಕ್ಕ ಪರಿಶೋಧನಾಧಿಕಾರಿ ಸುಂದರೇಶ್, ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮೇಪಾಡಂಡ ಸವಿತಾ ಕೀರ್ತನ್, ಅರಣ್ಯ ಸಂರಕ್ಷಣಾಧಿಕಾರಿ ಪ್ರೇಮ್‍ನಾಥ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ, ಸದಸ್ಯರಾದ ಪುಷ್ಪ, ಮುತ್ತಮ್ಮ, ಅನಿಫ್, ದಿನೇಶ್, ಸುಶೀಲಾವತಿ, ಕೀರ್ತನ್ ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಹಾರೈಸಿದರು. ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆ ಹೇಮಲತಾ, ರಮ್ಯಾ ಸಹಾಯಕಿ ಬೇಬಿ ರವರು ಉತ್ತಮವಾಗಿ ನಡೆಸಿಕೊಟ್ಟರು.











