ನಾಪೋಕ್ಲು ನ.19 NEWS DESK : ದೇವಾಲಯದ ಜೀರ್ಣೋದ್ಧಾರಕ್ಕಾಗಿ ನೆರವು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು. ಕಕ್ಕುಂದಕಾಡಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಅವರು ದೇವಾಲಯದ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳೊಂದಿಗೆ ಮಾತನಾಡಿ, ಗ್ರಾಮದ ದೇವಾಲಯದ ಅಭಿವೃದ್ಧಿಗೆ ನಮ್ಮ ಸಹಕಾರ ಇದ್ದೇ ಇರುತ್ತದೆ. ಗ್ರಾಮಸ್ಥರು ಒಗ್ಗೂಡಿ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಬೇಕು. ದೇವಾಲಯದ ಪುನರ್ ನಿರ್ಮಾಣಕ್ಕೆ ನಮ್ಮ ಕೊಡುಗೆ ನೀಡುತ್ತೇನೆ. ಮಾತ್ರವಲ್ಲದೆ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ ಅವರನ್ನು ನಾವೆಲ್ಲರೂ ಭೇಟಿ ಮಾಡಿ ಹೆಚ್ಚಿನ ಹಣ ಕ್ರೂಡೀಕರಣಕ್ಕೆ ಶ್ರಮಿಸಿ, ಜೊತೆಗೆ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಹೊದ್ದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಹೆಚ್.ಎ.ಹಂಸ, ಗ್ರಾಮ ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ್ ಬೇಬ, ಜೀರ್ಣೋದ್ಧಾರ ಆಡಳಿತ ಮಂಡಳಿ ಅಧ್ಯಕ್ಷ ಎಂ.ಪಿ.ಗೋಪಾಲ, ಖಜಾಂಜಿ ಟಿ.ಕೆ.ಸೂರ್ಯ ಕುಮಾರ್, ಉಪಾಧ್ಯಕ್ಷ ಟಿ.ವಿ.ಭವಾನಿ, ಗೌರವ ಅಧ್ಯಕ್ಷ ಟಿ.ಎನ್.ರಮೇಶ್, ಕಾರ್ಯದರ್ಶಿ ಟಿ.ಎಂ.ವಸಂತಕುಮಾರ್, ಕುಮಾರ ಸಿ, ದೇವಾಲಯದ ಮುಖ್ಯ ಅರ್ಚಕ ಸುಧೀರ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸಿತರಿದ್ದರು.
ವರದಿ : ದುಗ್ಗಳ ಸದಾನಂದ.











