Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ವಿಶ್ವ ಶೌಚಾಲಯ ದಿನಾಚರಣೆ : ಸ್ವಚ್ಛ ಶೌಚಾಲಯ ನಿರ್ವಹಣೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ವಿಶ್ವ ಶೌಚಾಲಯ ದಿನಾಚರಣೆ : ಸ್ವಚ್ಛ ಶೌಚಾಲಯ ನಿರ್ವಹಣೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ*

ನವೆಂಬರ್ 19, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ನ.19 NEWS DESK : ಕೊಡಗು ಜಿಲ್ಲಾ ಪಂಚಾಯ್ತಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಸ್ವಚ್ಛ್ ಭಾರತ್ ಮಿಷನ್ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ  (ಎನ್.ಎಸ್.ಎಸ್.) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ,  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿ ಸಂಘದ  ಆಶ್ರಯದಲ್ಲಿ ಪ್ರೌಢಶಾಲೆಯಲ್ಲಿ  ಸ್ವಚ್ಛ ಭಾರತ್ ಅಭಿಯಾನ ಹಾಗೂ  ‘ ಗೋ ಗ್ರೀನ್ ಅಭಿಯಾನ’ದಡಿ  ಎಲ್ಲರಿಗೂ ಆರೋಗ್ಯ ಮತ್ತು ನೈರ್ಮಲ್ಯ ಎಂಬ ಧ್ಯೇಯದೊಂದಿಗೆ  ” ವಿಶ್ವ ಶೌಚಾಲಯ ದಿನ”-2025 ದ ಅಂಗವಾಗಿ ಶೌಚಗೃಹ ಬಳಕೆ ಕುರಿತು ಜನಜಾಗೃತಿ ನಡೆಸಲಾಯಿತು. “ವಿಶ್ವ ಶೌಚಾಲಯ ದಿನ*ದ ಮಹತ್ವ ಹಾಗೂ ಶೌಚಾಲಯ ಸ್ವಚ್ಛತೆ ಕುರಿತು ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯೋಪಾಧ್ಯಾಯರೂ ಆದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ.ಪ್ರೇಮಕುಮಾರ್, ಶೌಚಾಲಯಗಳು ಸಾರ್ವಜನಿಕ ಆರೋಗ್ಯದ ಅಡಿಪಾಯವಾಗಿದ್ದು, ಆರೋಗ್ಯ, ನೈರ್ಮಲ್ಯ ಹಾಗೂ ಸ್ವಚ್ಚತೆ  ಕಾಪಾಡುವುದರೊಂದಿಗೆ ಪರಿಸರವನ್ನು ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ ಎಂದರು. ಸ್ವಚ್ಛ ಶೌಚಾಲಯ, ಸ್ವಚ್ಚ ಪರಿಸರ ಸಂಕಲ್ಪದ ಗುರಿ ಕುರಿತು ಮಾಹಿತಿ ನೀಡಿದ ಟಿ.ಜಿ.ಪ್ರೇಮಕುಮಾರ್  ಸ್ವಚ್ಛ ಶೌಚಾಲಯ ನಿರ್ವಹಣೆ ಕುರಿತು ಸ್ವತಃ ‌ತಾವೇ ಶೌಚಾಲಯವನ್ನು ಸ್ವಚ್ಛಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಸ್ವಚ್ಚತೆ, ನೀರಿನ ಬಳಕೆ ಮತ್ತು ನೈರ್ಮಲ್ಯದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಜನ ಸಮುದಾಯಕ್ಕೆ ನೈರ್ಮಲ್ಯದ ಮಹತ್ವ ಹಾಗೂ ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.   ಸ್ವಚ್ಛ ಶೌಚಾಲಯಗಳು ನಾಗರಿಕತೆಯ ಸಂಕೇತಗಳಾಗಿವೆ. ಸರಿಯಾದ ನೈರ್ಮಲ್ಯ ಅಭ್ಯಾಸಗಳನ್ನು ಉತ್ತೇಜಿಸಲು ಎಲ್ಲರಿಗೂ ಶೌಚಾಲಯ ಪ್ರವೇಶಗಳನ್ನು  ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗೋಣ ಎಂದು ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್  ಪ್ರತಿಜ್ಞಾ ವಿಧಿ ಬೋಧಿಸಿದರು. ಶೌಚಾಲಯ ಸ್ವಚ್ಛಗೊಳಿಸುವ ಸಂಕಲ್ಪ ಎಲ್ಲರ ಜವಾಬ್ದಾರಿಯಾಗಿದೆ. ನಾವು ಪ್ರತಿನಿತ್ಯ ಬಳಸುವ ಶೌಚಾಲಯವನ್ನು ಸ್ವತಃ ನಾವೇ ಸ್ವಚ್ಚಗೊಳಿಸುವ ಮೂಲಕ ಮತ್ತೊಬ್ಬರು ಅದೇ ಶೌಚಾಲಯವನ್ನು ಬಳಸುವ ರೀತಿಯಲ್ಲಿ ಸ್ವಚ್ಛಗೊಳಿಸುವುದು ನಮ್ಮ ಹೊಣೆಯಾಗಿದೆ ಎಂದು ಪ್ರೇಮಕುಮಾರ್ ಹೇಳಿದರು. ಶೌಚಾಲಯದ ಸ್ವಚ್ಛತೆ ಕುರಿತು
ನಾವೆಲ್ಲರೂ ಸ್ವಚ್ಛ ಮತ್ತು ಅಚ್ಚುಕಟ್ಟಾದ ಶೌಚಾಲಯಗಳಿಗೆ ಅರ್ಹರು. ಬಯಲು ಶೌಚ ಅನೇಕ ರೋಗಗಳಿಗೆ ಆಹ್ವಾನ ನೀಡುತ್ತದೆ. ಆದ್ದರಿಂದ ಜನ ಸಮುದಾಯಕ್ಕೆ ನೈರ್ಮಲ್ಯದ ಮಹತ್ವ ಹಾಗೂ ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಶೌಚಾಲಯ ದಿನ ಆಚರಿಸಲಾಗುತ್ತಿದೆ ಎಂದರು. 2030ರ ವೇಳೆಗೆ ವಿಶ್ವದ ಎಲ್ಲ ವೈಕ್ತಿಯೂ ಸುರಕ್ಷಿತ ಶೌಚಾಲಯ ಹೊಂದುವಂತೆ ಮಾಡುವುದು  ಕೇಂದ್ರ ಸರ್ಕಾರದ ಗುರಿಯಾಗಿದೆ
ಎಂದು ಹೇಳಿದರು. ಶಾಲಾ ಶೌಚಾಲಯದ ಸ್ವಚ್ಛತೆ ಕುರಿತು ಮಾತನಾಡಿದ ಶಾಲೆಯ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ, ನಾವು ಪ್ರತಿನಿತ್ಯ ಬಳಸುವ ಶೌಚಾಲಯವನ್ನು ನಿಯಮಿತವಾಗಿ ಸ್ವಚ್ಛಗೊಳಿಸುವ ಮೂಲಕ ಉತ್ತಮ ಆರೋಗ್ಯ, ನೈರ್ಮಲ್ಯ ಹಾಗೂ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಹಾಗೆಯೇ, ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಸ್ವಚ್ಛತೆಗೂ ಹೆಚ್ಚಿನ ಗಮನ ಹರಿಸುವ ಮೂಲಕ‌ ಉತ್ತಮ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು ಎಂದರು.
ಶಾಲೆಗಳಲ್ಲಿ ಸ್ವಚ್ಛ ಶೌಚಾಲಯಗಳ ಮಹತ್ವ ಕುರಿತು ಮಾಹಿತಿ ನೀಡಿದ ಶೌಚಾಲಯ ಸ್ವಚ್ಛತೆಯ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್ ಮಾತನಾಡಿ, ಸ್ವಚ್ಛವಾದ, ಉತ್ತಮವಾಗಿ ನಿರ್ವಹಿಸಲ್ಪಟ್ಟ ಶೌಚಾಲಯಗಳು ಕೇವಲ ಅವಶ್ಯಕತೆಯಷ್ಟೇ ಅಲ್ಲ, ಇವುಗಳು ವಿದ್ಯಾರ್ಥಿಗಳ ಆರೋಗ್ಯ, ನೈರ್ಮಲ್ಯ, ಸೌಕರ್ಯ ಮತ್ತು ಶೈಕ್ಷಣಿಕ ಯಶಸ್ಸಿನ ಮೂಲಾಧಾರವಾಗಿವೆ. ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಬೇಕು ಎಂದರು. ನಮ್ಮ‌‌ ಶಾಲೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರೇ ಸ್ವತಃ ಶಾಲಾ ಶೌಚಾಲಯವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಚತೆ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ. ಶಾಲೆಯಲ್ಲಿ ಪರಿಸರ ಮತ್ತು ಸ್ವಚ್ಚತೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ದಯಾನಂದ ಪ್ರಕಾಶ್ ಹೇಳಿದರು. ಶಾಲಾ ಶಿಕ್ಷಕರಾದ ಕೆ.ಗೋಪಾಲಕೃಷ್ಣ,  ಬಿ.ಡಿ.ರಮ್ಯ, ಬಿ.ಎನ್.ಸುಜಾತ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಹೆಬ್ಬಾಲೆ ಕ.ಸಾ.ಪ.ಘಟಕದ ಅಧ್ಯಕ್ಷ ಎಂ.ಎನ್.ಮೂರ್ತಿ, ಕಾರ್ಯದರ್ಶಿ ಎಚ್.ಎನ್.ಸುಬ್ರಮಣ್ಯ, ಕಛೇರಿ ಸಿಬ್ಬಂದಿ ಎಂ.ಉಷಾ, ವಿದ್ಯಾರ್ಥಿಗಳು ಇದ್ದರು. :: ಶಿಕ್ಷಕರಿಂದ ಮಕ್ಕಳಿಗೆ ಮಾಹಿತಿ ::  ಇದಕ್ಕೂ ಮೊದಲು ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಹಾಗೂ ಶಿಕ್ಷಕರು ಮಕ್ಕಳಿಗೆ ಶೌಚಾಲಯವನ್ನು ನಾವು ಹೇಗೆ ಸ್ವಚ್ಛ ಮಾಡಿ ಮತ್ತೊಬ್ಬರ ಬಳಕೆಗೆ ಅನುಕೂಲ ಮಾಡಿಕೊಡಬೇಕು ಎಂಬ ಬಗ್ಗೆ ಅರಿವು ಮೂಡಿಸಿದರು. ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರು, ಸ್ವತಃ ತಾವೇ ಶಾಲಾ ಶೌಚಾಲಯವನ್ನು ಸ್ವಚ್ಚಗೊಳಿಸಿ ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಅರಿವು ‌ಮೂಡಿಸಿದರು. :: ಮಕ್ಕಳಿಂದ ಜಾಗೃತಿ ಜಾಥಾ :: ಕೂಡ್ಲೂರು ಗ್ರಾಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ‘ವಿಶ್ವ ಶೌಚಾಲಯ ದಿನ’ದ ಅಂಗವಾಗಿ  ‘ಸ್ವಚ್ಛ ಶಾಲೆ- ಸ್ವಚ್ಛ ಶೌಚಾಲಯ, ಸ್ವಚ್ಛ ಶೌಚಾಲಯ ಪ್ರತಿಯೊಬ್ಬರ ಹಕ್ಕು, ನಿಮ್ಮ ಶೌಚಾಲಯವನ್ನು ಸುರಕ್ಷಿತವಾಗಿ ಮತ್ತು ಸ್ವಚ್ಛವಾಗಿಡಿ, ಶೌಚಾಲಯದ ಮಹತ್ವವನ್ನು  ಕಡಿಮೆ ಮಾಡಬೇಡಿ, ಸ್ವಚ್ಛ ಶೌಚಾಲಯವೇ ಸುರಕ್ಷಿತ ಶೌಚಾಲಯ, ನಮ್ಮ ಶೌಚಾಲಯ- ನಮ್ಮ ಆರೋಗ್ಯ, ‘ನಾವು ಬಯಲು ಶೌಚಕ್ಕೆ ಕಡಿವಾಣ ಹಾಕೋಣ’ ಎಂಬಿತ್ಯಾದಿ ಘೋಷಣೆಗಳ ಭಿತ್ತಿ ಫಲಕಗಳನ್ನು ಹಿಡಿದು ಜನರಲ್ಲಿ ವಿಶ್ವ ಶೌಚಾಲಯ ದಿನದ ಮಹತ್ವದ ಕುರಿತು ಜನಜಾಗೃತಿ ಮೂಡಿಸಿದರು. ಶಿಕ್ಷಕರು ಮಕ್ಕಳಿಗೆ ‘ಶೌಚಾಲಯ ಸ್ವಚ್ಛಗೊಳಿಸಿ  ನೈರ್ಮಲ್ಯ ಕಾಪಾಡೋಣ ಬನ್ನಿ’ ಎಂದು ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.