Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪುತ್ತೂರು : ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ : ಡಾ.ಗೀತಾಕುಮಾರಿ.ಟಿ*
ಇತ್ತೀಚಿನ ಸುದ್ದಿಗಳು

*ಪುತ್ತೂರು : ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ : ಡಾ.ಗೀತಾಕುಮಾರಿ.ಟಿ*

November 19, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪುತ್ತೂರು ನ.19 NEWS DESK : ಕನ್ನಡ ಎಂದಾಗ ನಮ್ಮ ನಾಡು ನುಡಿ ಮತ್ತು ಸಮುದಾಯ ಎನ್ನುವ ಭಾವನೆ ಬರುತ್ತದೆ. ಈ ಸುಂದರ ಭಾಷೆಯನ್ನು ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಗೀತಾಕುಮಾರಿ.ಟಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಎಸ್.ಎಲ್.ಭೈರಪ್ಪನವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ವಿವಿಧ ಸಾಹಿತ್ಯಿಕ ಚಟುವಟಿಕೆಗಳು ನಮ್ಮ ಯಾಂತ್ರೀಕೃತ ಬದುಕಿಗೆ ಚೈತನ್ಯವನ್ನು ನೀಡುತ್ತದೆ. ಯಾವುದೇ ಭಾಷೆಯನ್ನಾಗಲಿ ನಿರಂತರವಾಗಿ ಬಳಸಿದರೆ ಮಾತ್ರ ಅದರ ಉಳಿವು ಸಾಧ್ಯವಾಗುತ್ತದೆ. ಹಾಗಾಗಿ ಕನ್ನಡ ಭಾಷೆಯನ್ನು ಬಳಸುವಲ್ಲಿ ಮತ್ತು ಉಳಿಸುವಲ್ಲಿ ನಾವು ಶಕ್ತಿವಂತರಾಗಬೇಕು ಎಂದರು. ಎಸ್.ಎಲ್.ಭೈರಪ್ಪನವರ ಕೃತಿಗಳ ಹೆಸರನ್ನು ಬಳಸಿ ಬರೆದ ಸ್ವರಚಿತ ಕವನವನ್ನು ಅವರು ವಾಚಿಸಿದರು ಮತ್ತು ಅದರಲ್ಲಿರುವ ಸಾಮಾಜಿಕ ಚಿಂತನೆಗಳನ್ನು ವಿವರಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸತ್ಯನಾರಾಯಣ ಭಟ್ ಮಾತನಾಡಿ ಪ್ರತಿಯೊಬ್ಬನಿಗೂ ಮಾತೃ ಭಾಷೆಯ ಮೇಲೆ ಅಪಾರ ಅಭಿಮಾನವಿರಬೇಕು. ಭಾಷಾಭಿಮಾನವನ್ನು ಬೆಳೆಸುವ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ಓದುವ, ಬರೆಯುವ ಹವ್ಯಾಸಗಳು ಕಡಿಮೆಯಾಗಿವೆ ಬದಲಿಗೆ ಮೊಬೈಲ್‍ನಲ್ಲಿ ಕಳೆದು ಹೋಗುತ್ತಿದ್ದೇವೆ ಎಂದರು. ಪಾಠ ಹಾಗೂ ಪಠ್ಯೇತರ ವಿಷಯಗಳಿಗೆ ನಮ್ಮ ಸಂಸ್ಥೆಯಲ್ಲಿ ಸಮಾನ ಅವಕಾಶವನ್ನು ನೀಡಲಾಗುತ್ತಿದ್ದು ಇದರ ಪ್ರಯೋಜನವನ್ನು ಎಲ್ಲರೂ ಪಡೆಯುವಂತಾಗಲಿ ಎಂದರು. ತನ್ನ ನೇರ ನುಡಿಗಳಿಂದ ಸಾಹಿತ್ಯವನ್ನು ರಚಿಸಿದ ಎಸ್.ಎಲ್.ಭೈರಪ್ಪನವರ ಕೃತಿಗಳು ಸಮಾಜದ ಸಮಕಾಲೀನ ಸಮಸ್ಯೆಗಳನ್ನು ವಿವರಿಸುತ್ತವೆ ಎಂದರು. ಭೈರಪ್ಪನವರ ಕೃತಿಗಳು ಮತ್ತು ಚಿಂತನೆಗಳನ್ನು ನೆನಪಿಸಿದ ವಿದ್ಯಾರ್ಥಿ ಆದಿತ್ಯ ಅವರಿಗೆ ನುಡಿ ನಮನವನ್ನು ಸಲ್ಲಿಸಿದರು. ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ, ಲಹರಿ ಕನ್ನಡ ಸಂಘದ ಸಂಯೋಜಕ ಪ್ರೊ.ನವೀನ್.ಸಿ ಮತ್ತು ವಿದ್ಯಾರ್ಥಿ ಸಂಯೋಜಕ ದೀಪಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೀಪಕ್ ಸ್ವಾಗತಿಸಿದರು. ನಿಕ್ಷಿತಾ ಕಾರ್ಯಕ್ರಮ ನಿರ್ವಹಿಸಿದರು. ಈಶ್ವರಿ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ವಿಶ್ವ ಶೌಚಾಲಯ ದಿನಾಚರಣೆ : ಸ್ವಚ್ಛ ಶೌಚಾಲಯ ನಿರ್ವಹಣೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ*
Next Article *ನ.22 ರಂದು ಸಂತ ಮೈಕಲರ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ “ಸಮಾಗಮ”*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.