

ವಿರಾಜಪೇಟೆ ನ.19 NEWS DESK : ವಿರಾಜಪೇಟೆಯ ಸಾಹಿತಿಗಳು, ಪತ್ರಕರ್ತರು ಆದ ರಜಿತ ಕಾರ್ಯಪ್ಪ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿರಾಜಪೇಟೆ ತಾಲ್ಲೂಕು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗೋಣಿಕೊಪ್ಪದ ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ನಡೆದ ಮಹಿಳಾ ವಿಚಾರಗೋಷ್ಟಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಹಿನ್ನಲೆ ರಜಿತ ಕಾರ್ಯಪ್ಪ ಅವರನ್ನು ಅತಿಥಿ ಗಣ್ಯರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಗೋಣಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪ್ರಮೋದ್ ಗಣಪತಿ, ಗ್ರಾ.ಪಂ ಮಾಜಿ ಅಧ್ಯಕ್ಷೆ ಸೌಮ್ಯ ಬಾಲ ಕೃಷ್ಣ, ಗ್ರಾಮಾಭಿವೃದ್ಧಿ ಯೋಜಾನಾಧಿಕಾರಿ ಹರೀಶ್, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಉಷಾರಾಣಿ, ಗೋಣಿಕೊಪ್ಪ ಪೋಲಿಸ್ ಇಲಖೆಯ ಕಾವೇರಮ್ಮ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮುದಾಯ ಇಲಾಖೆಯ ವೈದ್ಯಾಧಿಕಾರಿ ಡಾ. ಗ್ರೀಷ್ಮಾ, ಗೋಣಿಕೊಪ್ಪ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಚಂದನ ಹಾಗೂ ಇತರರು ಇದ್ದರು.











