Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ : ಸ್ವಾಮಿ ವಿವೇಕಾನಂದರ ಸಂದೇಶಗಳು ಯುವಕರಿಗೆ ಮತ್ತು ಮನುಕುಲಕ್ಕೆ ಪ್ರೇರಣಾಶಕ್ತಿಯಾಗಿದೆ : ಕ್ಯಾಪ್ಟನ್ ಬೃಜೇಶ್ ಚೌಟ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ : ಸ್ವಾಮಿ ವಿವೇಕಾನಂದರ ಸಂದೇಶಗಳು ಯುವಕರಿಗೆ ಮತ್ತು ಮನುಕುಲಕ್ಕೆ ಪ್ರೇರಣಾಶಕ್ತಿಯಾಗಿದೆ : ಕ್ಯಾಪ್ಟನ್ ಬೃಜೇಶ್ ಚೌಟ

ನವೆಂಬರ್ 21, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ನ.21 NEWS DESK : ಸ್ವಾಮೀ ವಿವೇಕಾನಂದರು ಬದುಕಿದ್ದು ಕೇವಲ 39 ವರ್ಷಗಳು ಮಾತ್ರ ಆದರೆ ಯುವಕರಿಗೆ ಮತ್ತು ಮನುಕುಲಕ್ಕೆ ಅವರು ನೀಡಿದ ಸಂದೇಶಕ್ಕೆ ಅಳಿವೇ ಇಲ್ಲ. ಇದರ ಒಂದಷ್ಟು ಭಾಗವನ್ನಾದರೂ ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025 ಇದರ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಭಾರತೀಯರು ಭಯದಲ್ಲೇ ಬದುಕುವವರು ಎನ್ನುವ ಮಾತಿದೆ. ಇದಕ್ಕೆ ಅನೇಕ ಕಾರಣಗಳೂ ಇವೆ. ಆದರೆ ಆ ಮಾತನ್ನು ತೊಡೆದು ಹಾಕಿ ಭಯಮುಕ್ತರಾಗಿ ಬದುಕುವ ವ್ಯಾಪಕ ಅವಕಾಶಗಳಿವೆ ಎಂದರು. ಮಂಗಳೂರಿನಲ್ಲಿ 250ಕ್ಕೂ ಹೆಚ್ಚು ಮನೆಯಲ್ಲೇ ಬೆಳೆದ ಕಂಪೆನಿಗಳಿವೆ ಇವು ಸುಮಾರು 25000 ಉದ್ಯೋಗಿಗಳಿಗೆ ಅವಕಾಶವನ್ನು ನೀಡುತ್ತಿದ್ದು ಸಧ್ಯದಲ್ಲೇ ಇದೊಂದು ಐಟಿ ಹಬ್ ಆಗಿ ಬೆಳೆಯಲಿದೆ ಎಂದರು. ಈ ನೆಲದ ಸಾಮಥ್ರ್ಯಕ್ಕೆ ಅನುಗುಣವಾಗಿ ಹೊಸತನದ ಪ್ರಾರಂಭಕ್ಕೆ ಸರ್ವ ಪ್ರಯತ್ನವನ್ನು ಮಾಡೋಣ, ಇದಕ್ಕೆ ಯುವಜನತೆ ಕೈಜೋಡಿಸಬೇಕು ಎಂದರು. ಕೆಲವೇ ಸಮಯದಲ್ಲಿ ಈ ಕಾಲೇಜಿನ ಆವರಣದಲ್ಲಿ ಇನ್ನೂ ಹಲವು ಸ್ಟಾಟ್-ಅಪ್ ಸಂಸ್ಥೆಗಳನ್ನು ಪ್ರಾರಂಭಿಸುವುದಕ್ಕೆ ತಾನು ಕೈಜೋಡಿಸುವುದಾಗಿ ಭರವಸೆಯನ್ನು ನೀಡಿದರು. ಇನ್ನೋರ್ವ ಮುಖ್ಯ ಅತಿಥಿ ದ ವೆಬ್ ಪೀಪಲ್ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಆದಿತ್ಯ ಕಲ್ಲೂರಾಯ ಮಾತನಾಡಿ ಯಾವುದೇ ಕೆಲಸವನ್ನು ಪ್ರಾರಂಭಿಸಿದರೆ ಮಾತ್ರ ಅವರಿಗೆ ಅದರ ಪ್ರತಿಫಲ ದೊರಕುತ್ತದೆ. ನಾವು ಅಸಂಖ್ಯಾತ ಅವಕಾಶವಿರುವ ಪ್ರಪಂಚದಲ್ಲಿದ್ದೇವೆ ಕಷ್ಟಗಳು ಬಂದಾಗ ಓಡಿಹೋಗಬೇಡಿ ಅದನ್ನು ಸಮರ್ಥವಾಗಿ ಎದುರಿಸಿ ನಿಮ್ಮ ಜೀವನವನ್ನು ಕಟ್ಟಿಕೊಳ್ಳಿ ಎಂದರು. ಸ್ಟಾಟ್-ಅಪ್ ಸಂಸ್ಥೆಗಳನ್ನು ಪ್ರಾರಂಭಿಸುವುದಕ್ಕೆ ಕಾಲೇಜು ಅವಕಾಶ ನೀಡುವುದನ್ನು ಅವರು ಶ್ಲಾಘಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ ವಿದ್ಯಾರ್ಥಿಗಳು ತಾವೇನಾಗಬೇಕೆಂದು ನಿರ್ಧರಿಸಿ ಅದಕ್ಕೆ ತಕ್ಕುದಾದ ಅಡಿಪಾಯವನ್ನು ಗಟ್ಟಿಗೊಳಿಸಬೇಕು ಎಂದರು. ನಮ್ಮ ಸಂಸ್ಥೆಯು ವಿದ್ಯೆಯನ್ನು ಕೊಡುತ್ತದೆ ಅದರ ಜತೆಯಲ್ಲಿ ನಾವು ಯಾರು ಎನ್ನುವುದನ್ನೂ ನೆನಪಿಸುವ ಕಾರ್ಯವನ್ನು ಮಾಡುತ್ತದೆ. ಇನ್ನೂ ಪರಕೀಯರ ಭ್ರಮೆಯಲ್ಲಿ ಬದುಕುವ ನಾವು ಜಗತ್ತಿಗೆ ಕೊಟ್ಟ ವಿಷಯವನ್ನೇ ಮರೆತಿದ್ದೇವೆ. ನಮ್ಮ ದೇಶದ ಮಹಾಪುರುಷರು, ಸಾಧು-ಸಂತರು ತಿಳಿಸಿದ ವಿಷಯಗಳನ್ನು ವಿದೇಶೀಯರಿಂದ ತಿಳಿದುಕೊಳ್ಳಬೇಕಾದದ್ದು ನಮ್ಮ ದುರ್ದೈವ ಎಂದರು. ಕೇವಲ ಹಣವಂತರಾಗುವುದಲ್ಲ ಗುಣವಂತರಾಗಬೇಕು ಇಲ್ಲಿನ ಒಳ್ಳೆಯ ಸಂಗತಿಗಳನ್ನು ಇತರರಿಗೆ ತಿಳಿಸುವ ಮತ್ತು ಬೆಳೆಸುವ ಕಾರ್ಯ ನಿಮ್ಮಿಂದಾಗಲಿ ಎಂದರು. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2024-25ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ಡಾಟಾ ಸೈನ್ಸ್ ವಿಭಾಗದ ಸುಚಿತಾ, ಪ್ರಜ್ಞಾಶಂಕರಿ, ಸಿಂಚನಲಕ್ಷ್ಮಿ, ಶ್ರೀಲಕ್ಷ್ಮಿ.ವಿ, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗದ ರವಿನಾರಾಯಣ.ಕೆ.ಎಸ್, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ರಾಹುಲ್.ಕೆ, ಲಿಖಿತ.ಕೆ ಇವರನ್ನು ನಗದು ಬಹುಮಾನದೊಂದಿಗೆ ಸನ್ಮಾನಿಸಲಾಯಿತು. ಪ್ರತಿ ವಿಭಾಗದಲ್ಲಿ ಶೈಕ್ಷಣಿಕ ಸಾಧನೆಯನ್ನು ಮಾಡಿದ, ದತ್ತಿ ನಿಧಿ ಪ್ರಶಸ್ತಿಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಾಹಿತ್ಯಿಕ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಚಾಂಪಿಯನ್ ಆದ ತಂಡಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ದತ್ತಿ ನಿಧಿ ಪ್ರಶಸ್ತಿಗಾಗಿ ಶ್ರೀಮತಿ ಸುಧಾ ಶಣೈ ಅವರು ನೀಡಿದ ಮೊತ್ತ ರೂ ಹತ್ತು ಲಕ್ಷವನ್ನು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶಣೈ ಹಸ್ತಾಂತಿಸಿದರು. ಇದರ ಬಡ್ಡಿ ಮೊತ್ತದಿಂದ ವಿದ್ಯಾರ್ಥಿಗಳಿಗೆ ಸಹಾಯ ಧನವನ್ನು ನೀಡಲಾಗುತ್ತದೆ. ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನ ಇದರ ವತಿಯಿಂದ ಪ್ರಕಟಿಸಲಾದ ಭಾರತ್ ಬೌಧಿಕ್ಸ್ ಎನ್ನುವ ಪುಸ್ತಕವನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್‍ನ ಪ್ರಾಂಶುಪಾಲೆ ಡಾ.ಶೋಭಿತಾ ಸತೀಶ್ ಮತ್ತು ಶ್ರೀರಾಮ ಪದವಿ ಕಾಲೇಜಿನ ಕೃಷ್ಣ ಪ್ರಸಾದ್.ಕೆ ಪುಸ್ತಕ ಪರಿಚಯವನ್ನು ಮಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ, ಬ್ರಿಜ್ ಮ್ಯಾನ್ ಖ್ಯಾತಿಯ ಪದ್ಮಶ್ರೀ ಗಿರೀಶ್ ಭಾರದ್ವಾಜ್, ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್.ಬಿ, ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ ಭಟ್, ಸಂತೋಷ್ ಕುತ್ತಮೊಟ್ಟೆ, ಡಾ.ಯಶೋಧಾ ರಾಮಚಂದ್ರ, ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ, ಕಾರ್ಯಕ್ರಮ ಸಂಯೋಜಕ ಡಾ.ಚೇತನ್.ಪಿ.ಡಿ ಮತ್ತು ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಕಾಲೇಜಿನ ವಾರ್ಷಿಕ ವರದಿಯನ್ನು ಮಂಡಿಸಿದರು. ದಿತೇಶ್ ಗೌಡ ಮತ್ತು ಮೇಘನಾ ಅತಿಥಿಗಳನ್ನು ಪರಿಚಯಿಸಿದರು. ನಿಕ್ಷಿತಾ ಸ್ವಾಗತಿಸಿ, ಅನೂಷಾ ವಂದಿಸಿದರು. ಕ್ಷಿತಿ ಶೆಟ್ಟಿ ಹಾಗೂ ಶ್ರೀನಿವಾಸ್ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಶಾರದಾ ಪೂಜೆ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.13 NEWS DESK : ವಿರಾಜಪೇಟೆ ನಗರದ ಶಿವೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ವೈಭವದ ನವರಾತ್ರಿ…

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ಮುಂಗಾರು : ಬೆಳೆ ಸಮೀಕ್ಷೆ ಕಡ್ಡಾಯ

ಅಕ್ಟೋಬರ್ 13, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

2028ರ ವಿಧಾನಸಭಾ ಚುನಾವಣೆಯಲ್ಲಿ ಹೊಸ ಚಿಂತನೆಯ ವ್ಯಕ್ತಿಗಳು ಆಯ್ಕೆಯಾಗಲಿ : ಉದಯ ಕುಮಾರ್ ಜೆ.

ಅಕ್ಟೋಬರ್ 13, 2026

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಅ.15ರಂದು ಮೂನಾಡ್‌ನಲ್ಲಿ ಸಿಎನ್‌ಸಿಯ 6ನೇ ಶಾಂತಿಯುತ ಮಾನವ ಸರಪಳಿ; ಕೊಡವ ಜನಾಂಗದ ಅಸ್ತಿತ್ವ, ಭೂಮಿ, ಭಾಷೆ ಮತ್ತು ಸಂಸ್ಕೃತಿ ರಕ್ಷಣೆಗೆ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 13, 2026

ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.