ಮಡಿಕೇರಿ ನ.21 NEWS DESK : ಮಡಿಕೇರಿಯ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲ ಸಭೆ ನಡೆಯಿತು. ಸಭೆಯಲ್ಲಿ ಇಲಾಖೆವಾರು ವರದಿಯನ್ನು ಪಡೆದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಣ್ಣ ನೀರಾವರಿ ಹಾಗೂ ತಂತ್ರಜ್ಞಾನ ಸಚಿವರು ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಭೋಸರಾಜು ಅವರೊಂದಿಗೆ ಚರ್ಚಿಸುತ್ತಾ ಪ್ರತಿಯೊಂದು ಇಲಾಖೆಯ ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿದರು. ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ವರದಿಯನ್ನು ಸಲ್ಲಿಸಿದರು. ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಚೆಪ್ಪುಡೀರ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟರ್ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಕೆಡಿಪಿ ಸದಸ್ಯರುಗಳು ಹಾಗೂ ಎಲ್ಲಾ ಪ್ರಮುಖ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.











