ಮಡಿಕೇರಿ ನ.22 NEWS DESK : ಕೊಡಗು ಜಿಲ್ಲೆಯ ಕಲೆ, ಕ್ರೀಡೆ, ಸಂಸ್ಕøತಿ, ಖಾದ್ಯ, ಕೊಡಗಿನ ದಿನಚರಿ, ಧೈವಿಕತೆ, ಅರಣ್ಯ, ಪ್ರವಾಸಿ ಸ್ಥಳ, ಧಾರ್ಮಿಕ ಸ್ಥಳ, ಪ್ರವಾಸೋದ್ಯಮ ಮತ್ತು ಸಾಹಸೋದ್ಯಮ, ಬೆಳೆ ಹಾಗೂ ಇತರೆ ಎಲ್ಲಾ ವಿಷಯಗಳ ಸಮಗ್ರ ಮಾಹಿತಿಯನ್ನೊಳಗೊಂಡ 160 ಪುಟಗಳ ಕನ್ನಡ ಹಾಗೂ ಆಂಗ್ಲ ಭಾμÉಯ ಕಾಫಿ ಟೇಬಲ್ ಪುಸ್ತಕವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಗರದ ಜಿ.ಪಂ.ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಉಪಕಾರ್ಯದರ್ಶಿ ಚಂದ್ರಶೇಖರ್, ಸಹಾಯಕ ಕಾರ್ಯದರ್ಶಿ ಅಬ್ದುಲ್ ನಬಿ, ಜೀವನ್ ಕುಮಾರ್ ಇತರರು ಇದ್ದರು.












