ಮಡಿಕೇರಿ ನ.22 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವವನ್ನು ಕರ್ನಾಟಕ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಉದ್ಘಾಟಿಸಿದರು. ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮೈಸೂರು ವಿಭಾಗ ಕರ್ನಾಟಕ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಷ ಅಮರನಾಥ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಕೊಡಗು ಜಿಲ್ಲೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ,ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಆಹಾರ ಇಲಾಖೆ ಜಂಟಿ ನಿರ್ದೇಶಕರಾದ ಮಂಟೆಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಡಿ.ಆರ್. ಪ್ರಸನ್ನ ಕುಮಾರ್, ಜಿಲ್ಲಾ ಉದ್ಯೋಗ ವಿನಿಯಮ ಕೇಂದ್ರ ಜಿಲ್ಲಾ ಉದ್ಯೋಗಾಧಿಕಾರಿ ಮಂಜುನಾಥಸಿ.ಬಿ.ಇತರರು ಇದ್ದರು.











