ನಾಪೋಕ್ಲು ನ.22 NEWS DESK : ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿ ಕೆ.ಎ.ತಿನಿತ್ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೂಡಿಗೆಯಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. 10ನೇ ತರಗತಿಯ ವಿದ್ಯಾರ್ಥಿನಿ ಬಿ.ಎಂ.ಗಾನವಿ ಉದ್ದ ಜಿಗಿತ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ. ವಿದ್ಯಾರ್ಥಿ ನಿತೀಶ್ ನಂಜಪ್ಪ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಹಾಗೂ ರೀಲೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ. ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದು 10ನೇ ತರಗತಿಯ ವಿದ್ಯಾರ್ಥಿನಿ ಗಂಗಮ್ಮ ಬಿ.ಎಸ್ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಟೇಬಲ್ ಟೆನ್ನಿಸ್ ನಲ್ಲಿ ಏಳನೇ ತರಗತಿ ವಿದ್ಯಾರ್ಥಿನಿ ಪರಿಧಿ ಪೂವಮ್ಮ ಕೆ.ಬಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ಪ್ರಾಂಶುಪಾಲರಾದ ಬಿ.ಎಂ.ಶಾರದ, ಶಿಕ್ಷಕರಾದ ಮೂಡೇರ ಕಾಳಯ್ಯ, ಸವಿತಾ ಮಾರ್ಗದರ್ಶ ನೀಡಿದರು.
ವರದಿ : ದುಗ್ಗಳ ಸದಾನಂದ.











