ನಾಪೋಕ್ಲು ನ.22 NEWS DESK : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೂಡಿಗೆಯಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದ ಭಾರತ ಗುಂಡು ಎಸೆತ ಸ್ಪರ್ಧೆಯಲ್ಲಿ ಕಕ್ಕಬ್ಬೆ ಪ್ರೌಢಶಾಲೆಯ ವಿದ್ಯಾರ್ಥಿ ಪಿ.ಕೆ.ಫಾತಿಮತ್ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಆಡಳಿತ ಮಂಡಳಿ ಅಧ್ಯಕ್ಷ ಕೇಟೋಳಿರ ಕುಟ್ಟಪ್ಪ, ಬಾತ್ಮಿದಾರ ಸುಧಾ ಗಣಪತಿ, ಮುಖ್ಯ ಶಿಕ್ಷಕ ಅನಿಲ್ ರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಕೆ.ಡಿ.ಬೋಪಣ್ಣ ಮಾರ್ಗದರ್ಶನ ನೀಡಿದರು.
ವರದಿ : ದುಗ್ಗಳ ಸದಾನಂದ.











