ಮಡಿಕೇರಿ ನ.24 NEWS DESK : ಕಾವೇರಿ ಶಾಲೆಯಲ್ಲಿ ಸಂಸ್ಥಾಪಕರ ದಿನ ಹಾಗೂ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಸಂಸ್ಥಾಪಕರಾದ ದಿವಂಗತ ಶ್ರೀಮಾನ್ ಗುಡ್ಡಂಡ ನಂದಾ ಗಣಪತಿ ಹಾಗೂ ಕಾಂತೀ ಗಣಪತಿಯವರುಗಳ ಭಾವಚಿತ್ರಕ್ಕೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಸುದೇಶ್ ಬಿ.ಎಸ್, ಕಾರ್ಯದರ್ಶಿಯರಾದ ವಿನೋದ್ ಪಿ.ಎನ್, ಮುಖ್ಯ ಶಿಕ್ಷಕಿಯಾದ ಪಾರ್ವತಿ ಪಿ.ಯು, ಸಂಯೋಜಕಿಯಾದ ಅಮೃತ ಅರ್ಜುನ್ ಪುಷ್ಪ ನಮನವನ್ನು ಸಲ್ಲಿಸಿದರು. ವಿದ್ಯಾರ್ಥಿ ತಂಡದ ಮುಖಂಡರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲೆಯ ಮುಖ್ಯ ಶಿಕ್ಷಕಿ ಪಾರ್ವತಿ ಪಿ.ಯು ಮಾತನಾಡಿ ತಮ್ಮ ವಿಶಾಲ ದೃಷ್ಟಿಕೋನದಿಂದ ಕಟ್ಟಿದಂತಹ ಈ ಶಾಲೆಯ ಸಂಸ್ಥಾಪಕರುಗಳನ್ನು ಸ್ಮರಿಸುತ್ತಾ ಅವರುಗಳಲ್ಲಿ ಇದ್ದಂತಹ ಶಿಸ್ತು, ಸಮಯ ಪ್ರಜ್ಞೆಯ ಬಗ್ಗೆ ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟರು. ಮಕ್ಕಳ ದಿನಾಚರಣೆಯ ಮಹತ್ವದ ಬಗ್ಗೆ ಸಹ ಶಿಕ್ಷಕಿ ಭಾಗ್ಯ ಕಿರು ಭಾಷಣ ಮಾಡಿದರು. ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಹಲವಾರು ರೀತಿಯ ರಸಮಯವಾದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಅಲ್ಲದೆ ಶಿಕ್ಷಕರಿಂದ ವಿದ್ಯಾರ್ಥಿಗಳಿಗೋಸ್ಕರ ಹಲವಾರು ಮನರಂಜನ ಕಾರ್ಯಕ್ರಮಗಳನ್ನು ನಡೆಸಿಕೊಡಲಾಯಿತು. ಮಕ್ಕಳು ಇದನ್ನು ಸಂತೋಷದಿಂದ ಮನ ತುಂಬಿಕೊಂಡರು. ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗೆ ಸಿಹಿತಿಂಡಿಯನ್ನು ಹಂಚಲಾಯಿತು ಅದರೊಂದಿಗೆ ಮಧ್ಯಾಹ್ನದ ಉಪಹಾರವನ್ನು ನೀಡಲಾಯಿತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗೋಸ್ಕರ ಉಚಿತಕೂಪನ್ ವಿತರಿಸಿ, ಕೊಡುಗೆಗಳನ್ನು ನೀಡಲಾಯಿತು. ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ವಾಗತವನ್ನು ಶಿಕ್ಷಕಿ ಮಿಸ್ಬಾ ಫಾತಿಮಾ ಸ್ವಾಗತಿಸಿದರು. ಉಷಾ ಮತ್ತು ತಮಸ್ಸಿನಾ ನಿರೂಪಿಸಿದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ವಿನೋದ್ ವಂದಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ.ಎಸ್.ಸುದೇಶ್, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.











