ವಿರಾಜಪೇಟೆ ನ.24 NEWS DESK : ಇಂಟನ್ರ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ಐಐಹೆಚ್‍ಎಂ. ಬೆಂಗಳೂರು ವತಿಯಿಂದ 2025ರ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಾಯಡತ್ ಮುಹಮ್ಮದ್ ಶಾಫಿ ಸ್ವೀಕರಿಸಿದ್ದಾರೆ. ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಹೊಸಕೋಟೆಯ ಖಾಸಗಿ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಹಮ್ಮದ್ ಶಾಫಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಐ.ಐ.ಹೆಚ್.ಎಂ ಸಂಸ್ಥೆಯ ದಕ್ಷಿಣ ಭಾರತದ ನಿರ್ದೇಶಕರಾದ ಚೌದರಿ ಮತ್ತು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನಿಕಟಪೂರ್ವ ಅಧ್ಯಕ್ಷರು ಮತ್ತು ಶಕ್ತಿ ದಿನಪತ್ರಿಕೆಯ ಸಂಪಾದಕರಾದ ಚಿದ್ವಿಲಾಸ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇವರು ಮೂಲತಃ ಕುಂಜಿಲ-ಕಕ್ಕಬೆ ಗ್ರಾಮದ ನಿವಾಸಿಯಾಗಿದ್ದು, ಪ್ರಸ್ತುತ ವಿರಾಜಪೇಟೆಯ ಮೌಂಟೇನ್ ವ್ಯೂ ಶಾಲೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.











