ಮಡಿಕೇರಿ ನ.24 NEWS DESK : ಭಾರತ್ ಸ್ಕೌಟ್ಸ್, ಗೈಡ್ಸ್ ಕರ್ನಾಟಕ, ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಮಡಿಕೇರಿ ನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಮೈಸೂರು ವಿಭಾಗಮಟ್ಟದ “ದೇಶಭಕ್ತಿ *ಗೀತ ಗಾಯನ *”ಗಾನ ಸುಧೆ’ *ಕಾರ್ಯಕ್ರಮಕ್ಕೆ ಭಾನುವಾರ ಸಂಜೆ *ವರ್ಣರಂಜಿತ ತೆರೆ ಬಿದ್ದಿತು. ವಿಭಾಗಮಟ್ಟದ ಎಂಟು ಜಿಲ್ಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸಮವಸ್ತ್ರದೊಂದಿಗೆ ತಮ್ಮ ಸುಶ್ರಾವ್ಯ ಕಂಠದಿಂದ ಗೀತೆಗಳನ್ನು ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಸಮಾರೋಪ
ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕದ ಸಹಾಯಕ ರಾಜ್ಯ ಆಯುಕ್ತ( ಸ್ಕೌಟ್)
ಬಿ.ಕೆ.ಬಸವರಾಜ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸುವುದ ರೊಂದಿಗೆ ಅವರಲ್ಲಿ ದೇಶಪ್ರೇಮ, ಸೌಹಾರ್ದತೆ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಉತ್ತಮ ವೇದಿಕೆ ಒದಗಿಸುತ್ತದೆ ಎಂದರು. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ದೇಶದ ಹಿರಿಮೆ ಸಾರುವ ದೇಶಭಕ್ತಿ ಗೀತೆಗಳಿಂದ ಅಗಾದ ದೇಶಪ್ರೇಮ ಮೂಡುತ್ತದೆ. ನಾಡಿನ ಬಗ್ಗೆ ಅಭಿಮಾನ ಉಂಟು ಮಾಡುತ್ತದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಂಡು ಮುಂದಿನ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಪ್ರದರ್ಶಿಸುವ ಮೂಲಕ ರಾಷ್ಟಾಭಿಮಾನ ಬೆಳೆಸಿಕೊಳ್ಳಬೇಕು,’’ ಎಂದರು. ಸ್ಪರ್ಧೆಯಲ್ಲಿ ಎಲ್ಲಾ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಗಾಯನ ಹಾಡಿ ದೇಶದ ಹಿರಿಮೆಯನ್ನು ಮೆರೆದಿದ್ದು, ಮಕ್ಕಳ ಉತ್ತಮ ಪ್ರದರ್ಶನಕ್ಕೆ ಶಿಕ್ಷಕರು ಮತ್ತು ಪೋಷಕರ ಮಾರ್ಗದರ್ಶನ ಕೂಡ ಕಾರಣವಾಗಿದೆ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ದೇಶದ ಹಿರಿಮೆ ಸಾರುವ ದೇಶಭಕ್ತಿ ಗೀತೆಗಳಿಂದ ಅಗಾದ ದೇಶಪ್ರೇಮ ಮೂಡುತ್ತದೆ. ನಾಡಿನ ಬಗ್ಗೆ ಅಭಿಮಾನ ಉಂಟು ಮಾಡುತ್ತದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಂಡು ಮುಂದಿನ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಪ್ರದರ್ಶಿಸುವ ಮೂಲಕ ರಾಷ್ಟಾಭಿಮಾನ ಬೆಳೆಸಿಕೊಳ್ಳಬೇಕು,’’ ಎಂದರು. ಕೊಡಗು ಎಂದರೆ ಶಿಸ್ತು, ಸಂಯಮಕ್ಕೆ ಹೆಸರಾದ ಜಿಲ್ಲೆ. ವಿದ್ಯಾರ್ಥಿಗಳು ಕೊಡಗಿನ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಆದರ್ಶ ಹಾಗೂ ವ್ಯಕ್ತಿತ್ವವನ್ನು ರೂಢಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಬಸವರಾಜ್ ಕರೆ ನೀಡಿದರು. ಸಂಸ್ಥೆಯ ರಾಜ್ಯ ತರಬೇತಿ ಆಯುಕ್ತ ಪ್ರಭಾಕರ್ ಭಟ್ ಮಾತನಾಡಿ, ಸಂಸ್ಥೆಯ ವತಿಯಿಂದ ಗೀತ ಗಾಯನ ಸ್ಪರ್ಧೆಯನ್ನು ಉತ್ತಮವಾಗಿ ಸಂಘಟಿಸಿರುವುದನ್ನು ಶ್ಲಾಘಿಸಿದರು.
ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮನ್ನು ಕಲೆ, ಸಂಸ್ಕೃತಿ, ಸಂಗೀತ ಕ್ಷೇತ್ರದಲ್ಲಿ ತಮ್ಮ ಛಾಪನ್ನು ಮೂಡಿಸಿಕೊಂಡು ಉತ್ತಮ ಗಾಯಕರಾಗಿ ಹೊರಹೊಮ್ಮಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ
ಮಾತನಾಡಿ, ಈ ಸ್ಪರ್ಧೆಯು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಹಾಗೂ ರಾಷ್ಟ್ರೀಯ ಐಕ್ಯತೆ ಬೆಳೆಸಲು ಸಹಕಾರಿಯಾಗಿದೆ ಎಂದರು. ಈ ಸ್ಪರ್ಧೆಯ ಯಶಸ್ವಿ ಸಂಘಟನೆಗೆ ನಿರೀಕ್ಷೆಗೂ ಮೀರಿ ಸಹಕಾರ ಲಭಿಸಿದ್ದು, ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ನಗರಸಭೆಯ ಅಧ್ಯಕ್ಷೆ ಕಲಾವತಿ ಮಾತನಾಡಿ, ಮಕ್ಕಳ ಗೀತಾ ಗಾಯನ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ರಾಷ್ಟಾಭಿಮಾನ ಬೆಳೆಸಿಕೊಳ್ಳಬೇಕು ಎಂದರು. ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ , ಗೀತ ಗಾಯನ ಸ್ಪರ್ಧೆಯ ಉದ್ದೇಶ ತಿಳಿಸಿದರು. ಸಂಸ್ಥೆಯ ಸ್ಥಾನಿಕ ಆಯುಕ್ತ ಎಚ್ .ಆರ್ .ಮುತ್ತಪ್ಪ, ಜಿಲ್ಲಾ ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು.ರಂಜಿತ್ , ಜಿಲ್ಲಾ ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ , ಕೋಶಾಧಿಕಾರಿ ನರೇಶ್, ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಂ.ಧನಂಜಯ, ಜಿಲ್ಲಾ ಬುಲ್ ಬುಲ್ ಆಯುಕ್ತೆ ಡೈಸಿ ಫ್ರಾನ್ಸಿಸ್ , ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಎಂ.ಎಂ.ವಸಂತಿ, ಕೋಶಾಧಿಕಾರಿ ಟಿ.ಎಂ.ಮುದ್ದಯ್ಯ, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಕಮೀಷನರ್ ತರಬೇತುದಾರ ಕೆ.ಬಿ.ಗಣೇಶ್ ಎಸ್ ಡಿ ಎಂಸಿ ಅಧ್ಯಕ್ಷ ಎನ್.ಎಂ.ಜಗದೀಶ್, ಸಂಪನ್ಮೂಲ ಶಿಕ್ಷಕಿ ಮಂಜುಳಾ ಚಿತ್ತಾಪುರ್, ಸ್ಕೌಟ್ಸ್ ಮಾಸ್ಟರ್ ಡಿ.ವಿ.ಗಣೇಶ್, ಸ್ಕೌಟ್ಸ್ , ಗೈಡ್ಸ್ ನ ಶಿಕ್ಷಕರು, ಶಿಕ್ಷಕಿಯರು ಇದ್ದರು.











