Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಟ್ರೇಡ್ಸ್ ನಡಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರು, ಉದ್ಯಮದಾರರಿಗೆ ಪ್ರಯೋಜನ : ನಾಗೇಂದ್ರ ಪ್ರಸಾದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಟ್ರೇಡ್ಸ್ ನಡಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರು, ಉದ್ಯಮದಾರರಿಗೆ ಪ್ರಯೋಜನ : ನಾಗೇಂದ್ರ ಪ್ರಸಾದ್*

ನವೆಂಬರ್ 25, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.25 NEWS DESK :  ಟ್ರೇಡ್ಸ್ ಯೋಜನೆಯಡಿ ವ್ಯಾಪಾರಸ್ಥರು ಮತ್ತು ಕೈಗಾರಿಕೋದ್ಯಮಿಗಳಿಗೆ ಹಲವು ಯೋಜನೆಗಳಿದ್ದು, ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ. 2025-26 ನೇ ಸಾಲಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ವೇಗಗೊಳಿಸುವ (ಆರ್‍ಎಎಂಪಿ) ಯೊಜನೆಯಡಿ ಕೊಡಗು ಜಿಲ್ಲೆಯಲ್ಲಿ ಉದ್ಯಮ ನೋಂದಣಿ ಪಡೆದಿರುವ ನೋಂದಾಯಿತ ಉದ್ಯಮಿಗಳಿಗೆ ಟ್ರೇಡ್ ರಿಸಿವೇಬಲ್ಸ್ ಡಿಸ್ಕೌಂಟಿಂಗ್ ಸಿಸ್ಟಮ್ (ಟಿಆರ್‍ಎಡಿಎಸ್) (ಟ್ರೆಡ್ಸ್ ಎಂದರೆ ವ್ಯಾಪಾರ ಹಣ ರಿಯಾಯಿತಿ ವ್ಯವಸ್ಥೆ) ಆನ್‍ಲೈನ್ ಪ್ಲಾಟ್‍ಫಾರ್ಮ್‍ಗೆ ಸಂಬಂಧಿಸಿದಂತೆ ನಗರದ ಹೋಟೆಲ್ ರೆಡ್‍ಬ್ರಿಕ್ಸ್‍ನಲ್ಲಿ ನಡೆದ ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುವ ಜನರಿಗೆ ಉದ್ಯೋಗ ಒದಗಿಸುವಲ್ಲಿ ಬೃಹತ್ ಮತ್ತು ಸಣ್ಣ ಕೈಗಾರಿಕೆಗಳ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಪಾತ್ರ ಹೆಚ್ಚಿನದ್ದಾಗಿದೆ ಎಂದರು. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ವ್ಯಾಪಾರಸ್ಥರು ಮತ್ತು ಗ್ರಾಹಕರಿಗೆ ಟ್ರೇಡ್ಸ್ ಅನುಕೂಲವಿದ್ದು, ಟ್ರೇಡ್ ವ್ಯವಸ್ಥೆಯಲ್ಲಿ ನೋಂದಣಿ ಮಾಡಿಕೊಂಡು ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗೆ ಉತ್ತೇಜನ ನೀಡುವಂತಾಗಬೇಕು ಎಂದು ನಾಗೇಂದ್ರ ಪ್ರಸಾದ್ ಅವರು ವಿವರಿಸಿದರು. ಇದೊಂದು ವ್ಯಾಪಾರಸ್ಥರಿಗೆ, ಉದ್ಯಮಿಗಳಿಗೆ ಲಾಭದಾಯಕವಾಗಿದ್ದು, ಪೂರೈಕೆದಾರರಿಗೂ ಸಹ ಅನುಕೂಲವಿದೆ. ಆ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಅವರು ನುಡಿದರು.  ಟೆಕ್ಸಾಕ್ ಸಂಸ್ಥೆಯ ಸಿಇಒ ಹಾಗೂ ಮುಖ್ಯ ಸಲಹೆಗಾರರಾದ ಸಿದ್ದರಾಜು ಅವರು ಮಾತನಾಡಿ ಟ್ರೇಡ್ಸ್ ರಿಸಿವೇಬಲ್ ಎಲೆಕ್ಟ್ರಾನಿಕ್ಸ್ ಡಿಸ್ಕೌಂಟಿಂಗ್ ವ್ಯವಸ್ಥೆಯು ಗ್ರಾಹಕರು ಮತ್ತು ಉದ್ಯಮದಾರರಿಗೆ ಅನುಕೂಲವಿದ್ದು, ಇದರಲ್ಲಿ ನೋಂದಣಿ ಮಾಡಿಕೊಂಡು ವ್ಯಾಪಾರ, ವಹಿವಾಟು ನಡೆಸುವಂತಾಗಬೇಕು ಎಂದು ಅವರು ಹೇಳಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್  ಮಾತನಾಡಿ ಬ್ಯಾಂಕ್‍ಗಳ ಮೂಲಕ ಹಲವು ಯೋಜನೆಗಳಿದ್ದು, ಅವುಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದರು. ಬೀದಿ ಬದಿ ವ್ಯಾಪಾರಿಗಳಿಗೆ ಸಹಾಯಧನ ಕಲ್ಪಿಸಲಾಗುತ್ತದೆ. ಸಣ್ಣ ಸಣ್ಣ ವ್ಯಾಪಾರಿಗಳಿಗೆ ಹಲವಾರು ಸೌಲಭ್ಯಗಳಿದ್ದು, ಅವುಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗುವತ್ತ ಗಮನಹರಿಸಬೇಕು ಎಂದು ಹೇಳಿದರು.   ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರಾದ ಕೆ. ಹನುಮಂತರಾಯ ಅವರು ಮಾತನಾಡಿ ಪರಿಶಿಷ್ಟ ಜಾತಿ,  ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಸೂಕ್ಷ್ಮ, ಸಣ್ಣ ಪ್ರಮಾಣದ ಕೈಗಾರಿಕೆ, ಆರೋಗ್ಯ ಮತ್ತು ಆತಿಥ್ಯ ಸೇವಾ ಘಟಕಗಳಿಗೆ ಹಾಗೂ ನಿರ್ಮಾಣ/ ರಿಯಲ್ ಏಸ್ಟೇಟ್ ಚಟುವಟಿಕೆಗಳ ಘಟಕಗಳಿಗೆ ರೂ.10 ಲಕ್ಷದಿಂದ 10 ಕೋಟಿ ರೂ.ಗಳವರೆಗೆ ಬಡ್ಡಿ ಸಹಾಯಧನ ಸಾಲ ಯೋಜನೆ ಒದಗಿಸಲಾಗುತ್ತದೆ ಎಂದು ಹೇಳಿದರು. ಮಂಗಳೂರು ಬ್ರಾಂಚ್ ಇನ್ ಚಾರ್ಜ್ ಬಿ.ಆರ್ ಎಂ.ಎಸ್.ಎಂ.ಇ.ಡಿ ಎಫ್.ಓ ಯಯ್ಯಾಡಿ ಕೈಗಾರಿಕಾ ವಸಾಹತು ವಿಭಾಗದ ಸಹಾಯಕ ನಿರ್ದೇಶಕರಾದ ಎಂ.ಸುಂದರ ಸೆರಿಗಾರ್ ಅವರು ಮಾತನಾಡಿ  ಸೃಜನಶೀಲವಾಗಿ ವಿಷಯಗಳ ಬಗ್ಗೆ ಆಲೋಚನೆ ಮಾಡಿದರೆ ಸಾರ್ವಜನಿಕರಿಗೆ ನಿಖರವಾಗಿ ಸೌಲಭ್ಯ ಒದಗಿಸಲು ಅನುಕೂಲ ಆಗಲಿದೆ ಎಂದರು.  ಕೆಎಸ್‍ಎಫ್‍ಸಿ ಎಜಿಎಂ ರವಿ ಅವರು ಮಾತನಾಡಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ವತಿಯಿಂದ ಆಕರ್ಷಕ ಬಡ್ಡಿದರದಲ್ಲಿ ಸಾಲ ಯೋಜನೆಗಳು ದೊರೆಯಲಿವೆ. ಸೂಕ್ಷ್ಮ ಹಾಗೂ ಸಣ್ಣ ಪ್ರಮಾಣದ ಕೈಗಾರಿಕಾ ಚಟುವಟಿಕೆಗಳ ಘಟಕಗಳಿಗೆ ರೂ.5  ಲಕ್ಷದಿಂದ 5 ಕೋಟಿ ರೂ.ಗಳವರೆಗೆ ಶೇ.5.5 ರಷ್ಟು ಬಡ್ಡಿ ಸಹಾಯಧನ ಸಾಲ ಯೋಜನೆ. ಮಹಿಳಾ ಉದ್ಯಮಿಗಳಿಗೆ ಆರೋಗ್ಯ ಹಾಗೂ ಆತಿಥ್ಯ ಸೇವಾ ಚಟುವಟಿಕೆಗಳ ಘಟಕಗಳಿಗೆ ರೂ.5 ಲಕ್ಷದಿಂದ 5 ಕೋಟಿ ರೂ.ಗಳವರೆಗೆ ಶೇ.4 ರಷ್ಟು ಬಡ್ಡಿ ಸಹಾಯಧನ ಸಾಲ ಯೋಜನೆ ಎಂದರು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಸೂಕ್ಷ್ಮ, ಸಣ್ಣ ಪ್ರಮಾಣದ ಕೈಗಾರಿಕಾ, ಆರೋಗ್ಯ ಮತ್ತು ಆತಿಥ್ಯ ಸೇವಾ ಘಟಕಗಳಿಗೆ ಹಾಗೂ ನಿರ್ಮಾಣ/ ರಿಯಲ್ ಏಸ್ಟೇಟ್ ಚಟುವಟಿಕೆಗಳ ಘಟಕಗಳಿಗೆ ರೂ.10 ಲಕ್ಷದಿಂದ 10 ಕೋಟಿ ರೂ.ಗಳವರೆಗೆ ಶೇ.4 ರಷ್ಟು ಬಡ್ಡಿ ಸಹಾಯಧನ ಸಾಲ ಯೋಜನೆ. ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2(ಎ) ಜಾತಿಗಳ ಉದ್ಯಮಿಗಳಿಗೆ ಸೂಕ್ಷ್ಮ, ಸಣ್ಣ ಪ್ರಮಾಣದ ಕೈಗಾರಿಕಾ, ಆರೋಗ್ಯ ಹಾಗೂ ಆತಿಥ್ಯ ಸೇವಾ ಚಟುವಟಿಕೆಗಳ ಘಟಕಗಳಿಗೆ ರೂ.5 ಲಕ್ಷದಿಂದ 10 ಕೋಟಿ ರೂ.ಗಳವರೆಗೆ ಶೇ.5.5 ರಷ್ಟು ಬಡ್ಡಿ ಸಹಾಯಧನ ಸಾಲ ಯೋಜನೆ ದೊರೆಯಲಿದೆ ಎಂದು ಅವರು ತಿಳಿಸಿದರು.  ಅಲ್ಪಸಂಖ್ಯಾತ ಸಮುದಾಯಗಳ ಉದ್ಯಮಿಗಳಿಗೆ ಸೂಕ್ಷ್ಮ, ಸಣ್ಣ ಪ್ರಮಾಣದ ಕೈಗಾರಿಕಾ, ಆರೋಗ್ಯ ಹಾಗೂ ಆತಿಥ್ಯ ಸೇವಾ ಚಟುವಟಿಕೆಗಳ ಘಟಕಗಳಿಗೆ ರೂ.5 ಲಕ್ಷದಿಂದ 10 ಕೋಟಿ ರೂ.ಗಳವರೆಗೆ ಶೇ.5.5 ರಷ್ಟು ಬಡ್ಡಿ ಸಹಾಯಧನ ಸಾಲ ಯೋಜನೆ ಇದೆ ಎಂದು ಮಾಹಿತಿ ನೀಡಿದರು. ಲೀಡ್ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕರಾದ ಆರ್.ಕೆ.ಬಾಲಚಂದ್ರ ಅವರು ಕಾರ್ಯಗಾರದಲ್ಲಿ ವಿಶೇಷ ತರಬೇತಿ ನೀಡಿದರು. ಕುಶಾಲನಗರ ತಾಲೂಕು ಒಕ್ಕೂಟ ಆರ್.ಸಿ.ಕೂಡಿಗೆ ನಿರ್ದೇಶಕರಾದ ಕೆ.ಪ್ರಕಾಶ್ ಕುಮಾರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕರಾದ ಸಿ.ಎನ್.ರಘು,  ಅವರು ಮಾತನಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.