Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ ಸಂಭ್ರಮದ ಓಣಂ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ ಸಂಭ್ರಮದ ಓಣಂ ಆಚರಣೆ*

ನವೆಂಬರ್ 25, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ನ.25 NEWS DESK : ಇಡೀ ಜಗತ್ತಿನಲ್ಲಿ ಮಾನವ ಕುಲವೊಂದೇ. ಎಲ್ಲಾ ಧರ್ಮಗಳ ಸಾರವು ಒಂದೇ. ಎಲ್ಲರ ಆಧ್ಯಾತ್ಮಿಕ ಚಿಂತನೆಯು ಒಂದೇ ಎನ್ನುವ ದಿವ್ಯ ಸಂದೇಶವನ್ನು ಈ ನಾಡಿಗೆ ನೀಡಿ ಎಲ್ಲರ ಹೃದಯದಲ್ಲಿ ಮನೆ ಮಾತಾಗಿರುವ ಸಂತ ನಾರಾಯಣ ಗುರುಗಳ ಜನ್ಮ ದಿನಾಚರಣೆಯನ್ನು ಸಂಘಟನೆಯೊಂದು ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಅರಮೇರಿ ಕಳಂಚೇರಿ ಮಠದ ಸ್ವಾಮೀಜಿ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ನಾಪೋಕ್ಲುವಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ನಾಪೋಕ್ಲು ವತಿಯಿಂದ 171ನೇ ಶ್ರೀ ನಾರಾಯಣ ಗುರು ಜಯಂತಿ ಹಾಗೂ ಓಣಂ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಳಂಚೇರಿ ಮಠದ ಪೀಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಿದರು. ಮನುಷ್ಯನಲ್ಲಿರುವ ದ್ವೇಷ ಕ್ಲೇಶಗಳನ್ನು ಕಳೆದು ಇಡೀ ಸಮಾಜವನ್ನು ಪ್ರೀತಿಸುವಂತಹ ವ್ಯಕ್ತಿ ಆಗಬೇಕು. ಶೋಷಿತ ವರ್ಗದವರಿಗೆ ಬದುಕನ್ನು ಕಟ್ಟಿಕೊಳ್ಳುವ, ಧಾರ್ಮಿಕವಾಗಿ ಸಾಮಾಜಿಕವಾಗಿ ಮೇಲೆ ಬರುವ ಚಿಂತನೆಗಳನ್ನು ಸಮಾಜದಲ್ಲಿ ಮೂಡಿಸಿದ ಶ್ರೇಷ್ಠ ಸಂತ ಬಸವಣ್ಣನವರ ನಂತರ ಅದನ್ನು ಜಾಗೃತಿಗೊಳಿಸಿದ ಶ್ರೇಷ್ಠ ಸಂತ ನಾರಾಯಣ ಗುರುಗಳು. ಅವರ ಜನ್ಮ ದಿನಾಚರಣೆ ಸಂಭ್ರಮದಲ್ಲಿ ನಾವು ಭಾಗಿಯಾಗುತ್ತಿರುವುದು ಸಂತಸದ ವಿಷಯ ಎಂದರು. ಈ ದೇಶದಲ್ಲಿ ಇರುವ ಪ್ರತಿ ಪ್ರಜೆಗೆ ಆಧ್ಯಾತ್ಮಿಕ ಅರಿವು ಮೂಡಿಸುವ ಅಗತ್ಯವಿಲ್ಲ. ಭರತ ಖಂಡದಲ್ಲಿ ಹುಟ್ಟಿದ ಪ್ರತಿ ವ್ಯಕ್ತಿ ಧರ್ಮದಲ್ಲಿ ಜನಿಸಿ ಧರ್ಮದಲ್ಲೇ ಬೆಳೆದು ಧರ್ಮದಲ್ಲಿ ಬದುಕನ್ನು ಕೊನೆಗೊಳಿಸುತ್ತಾನೆ. ಭಾರತದ ಎಲ್ಲಾ ಭಾಗಗಳಲ್ಲಿ ತನ್ನ ಸಂದೇಶವನ್ನು ಸಾರಿ ಧರ್ಮದ ತಳಹದಿಯಲ್ಲಿ ಇಡೀ ಧರ್ಮವನ್ನು ಸಂಘಟಿಸ ಲಾಗುತ್ತಿದೆ. ಗುರುವನ್ನು ಮುಂದಿಟ್ಟುಕೊಂಡು ಸಂಘಟನೆ ಬೆಳೆಯುತ್ತದೆ ಎಂದರು. ಬಾಹ್ಯ ಒತ್ತಡದಿಂದ ಒಬ್ಬ ವ್ಯಕ್ತಿಯನ್ನು ಬದಲಾಯಿಸಲು ಸಾಧ್ಯವಿಲ್ಲ. ನಮ್ಮ ವ್ಯಕ್ತಿತ್ವವನ್ನು ನಾವೇ ರೂಪಿಸಿಕೊಳ್ಳಬೇಕು. ಗುರುವನ್ನು ಮೀರಿದ ವಸ್ತು ಇನ್ನೊಂದಿಲ್ಲ ಭಾರತದ ಶ್ರೇಷ್ಠ ಪರಂಪರೆ ನಾರಾಯಣ ಗುರುಗಳ ಜನ್ಮ ದಿನಾಚರಣೆ ಮೂಲಕ ನಾಡಿನ ಪರಂಪರೆ ಮುಂದುರೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಕಾರ್ಯಕ್ರಮದಲ್ಲಿ ನಾಪೋಕ್ಲು ಟೌನ್ ಜುಮ್ಮಾ ಮಸೀದಿಯ ಧರ್ಮ ಗುರು ಶೌಕತ್ ಆಲಿ ಸಕಾಫಿ ಮಾತನಾಡಿ, ಎಲ್ಲಾ ಧರ್ಮಗಳ ಸಾರ ಒಂದೇ ನಾವೆಲ್ಲರೂ ವಿದ್ಯಾವಂತರಾಗಿ ಮಾನವೀಯತೆಯನ್ನು ಮೈಗೂಡಿಸಿಕೊಂಡು ಪರಸ್ಪರ ಅರಿತು ಬಾಳಬೇಕೆಂದರು. ನಾರಾಯಣಗುರುಗಳ ಜೀವನ ಆದರ್ಶಗಳ ಬಗ್ಗೆ ಬೆಳಕು ಚೆಲ್ಲಿ ಶುಭ ಹಾರೈಸಿದರು. ಎಸ್ ಎನ್ ಡಿ ಪಿ ಕೊಡಗು ಯೂನಿಯನ್ ಸಿದ್ದಾಪುರ ಘಟಕದ ಅಧ್ಯಕ್ಷ ವಿ.ಕೆ.ಲೋಕೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಗ್ರಾಮ ಪಂಚಾಯತಿ ಸದಸ್ಯ ಕೆ.ಎ.ಇಸ್ಮಾಯಿಲ್, ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ, ರೇಣುಕೇಶ್, ಜಮಾಯತ್ ಅಧ್ಯಕ್ಷರಾದ ಎಂ.ಹೆಚ್ ಅಬ್ದುಲ್ ರೆಹಮಾನ್. ಪೊನ್ನು ಮುತ್ತಪ್ಪ ದೇವಾಲಯದ ಅಧ್ಯಕ್ಷ ಚಂದ್ರನ್ ಮಾತನಾಡಿ, ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ ಶುಭ ಹಾರೈಸಿದರು. ಎಸ್ ಎನ್ ಡಿ ಪಿ ನಾಪೋಕ್ಲು ಶಾಖೆಯ ಅಧ್ಯಕ್ಷ ಟಿ.ಸಿ ಲವ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಜೆಡಿಎಸ್ ವಕ್ತಾರ ಮನ್ಸೂರು ಆಲಿ ಎಂ,ಎ, ಕಾಫಿ ಬೆಳೆಗಾರರು ವಕೀಲರು ಕೂಡಿಮನಿಯಿಂದ ಶರಣು ಕುಟ್ಟಪ್ಪ, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಂಸ, ಕಾಫಿಬೆಳೆಗಾರ ವಿ.ಎಸ್.ಎಸ್.ಎನ್ ನಿರ್ದೇಶಕ ಅರೆಯಡ ರತ್ನ ಪೆಮ್ಮಯ್ಯ, ಎಸ್ ಎನ್ ಡಿ ಪಿ ನಾಪೋಕ್ಲು ಶಾಖೆಯ ಶಾಖೆ ಉಪಾಧ್ಯಕ್ಷ ಹರಿದಾಸ್, ಆಚರಣಾ ಸಮಿತಿ ಉಪಾಧ್ಯಕ್ಷ ತಂಗ, ಸುರೇಶ್, ಕಾರ್ಯದರ್ಶಿ ಪಿ.ಸಿ.ಕಿಶೋರ್, ಸಹ ಕಾರ್ಯದರ್ಶಿ ಅಜಿತ್ ಎಂ.ಆರ್, ಆಚರಣಾ ಸಮಿತಿ ಉಪಾಧ್ಯಕ್ಷ ಟಿ.ಕೆ.ಸತೀಶ್ ಎಂ.ಕೆ, ಟಿ.ಸಿ.ಹರೀಶ್, ಮಣ, ಹರೀಶ್ ಕುಮಾರ್, ಆಚರಣ ಸಮಿತಿ ಉಪಾಧ್ಯಕ್ಷ ಸತೀಶ್ ಸೇರಿದಂತೆ ಸಮಿತಿ ಸದಸ್ಯರು ಸಾರ್ವಜನಿಕರು ಉಪಸ್ಥಿತರಿದ್ದರು. ಹರ್ಷ ಬಾಲಕೃಷ್ಣ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ರವಿ ಓಂಕಾರ್ ಸ್ವಾಗತಿಸಿ, ರೇಡಿಯೋ ಉದ್ಘಾಷಕಿ ಬಾಳೆಯಡ ದಿವ್ಯಮಂದಪ್ಪ ಹಾಗೂ ರವಿ ಓಂಕಾರ್ ನಿರೂಪಿಸಿದರು. ಬಳಿಕ 7 ಬೀಟ್ಸ್ ಆರ್ಕೆಸ್ಟ್ರಾ ಕ್ಯಾಲಿಕೆಟ್ ನೇತೃತ್ವದಲ್ಲಿ ರಸಮಂಜರಿ ಕಾರ್ಯಕ್ರಮ ಜರುಗಿ ಪ್ರೇಕ್ಷಕರನ್ನು ರಂಜಿಸಿತು. ಇದಕ್ಕೂ ಮೊದಲು ಇಲ್ಲಿಯ ಸಂತೆ ಮೈದಾನದಿಂದ ಶ್ರೀ ನಾರಾಯಣ ಗುರುಗಳ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಇರಿಸಿ ಕೇರಳದ ವಿಶೇಷ ಚೆಂಡೆ ಮೇಳಗಳೊಂದಿಗೆ ಪಟ್ಟಣದ ಮುಖ್ಯ ಬೀದಿಯಲ್ಲಿ ಮೆರವಣಿಗೆ ಸಾಗಿತು. ಈ ಸಂದರ್ಭ ಪುರುಷರ ಅಂತಿಮ ಹಗ್ಗ ಜಗ್ಗಾಟ ಸ್ಪರ್ಧ ಕಾರ್ಯಕ್ರಮವನ್ನು ಗಣ್ಯರು ಕ್ರೀಡಾಪಟುಗಳನ್ನು ಪರಿಚಯಿಸಿಕೊಂಡು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಐದು ಸಾಧಕರನ್ನು ನಾಪೆÇೀಕ್ಲು ಶಾಖೆಯ ಪರವಾಗಿ ವೇದಿಕೆಯಲ್ಲಿದ್ದ ಗಣ್ಯರು ಸನ್ಮಾನಿಸಿ ಗೌರವಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾದ ಪುರುಷರ ಹಗ್ಗ ಜಗ್ಗಾಟದಲ್ಲಿ ಇಗ್ಗುತ್ತಪ್ಪ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು ಪ್ರಥಮ ವಿಜೇತರಿಗೆ 30000 ರೂ.ನಗದು ಹಾಗೂ ಟ್ರೋಫಿ, ಹಿಂದೂ ಮಲಯಾಳಿ ಸಂಘ ಕಾರ್ಗಿಲ್ ಕೊಡಗು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ತಂಡಕ್ಕೆ ದ್ವಿತೀಯ ಬಹುಮಾನ 15000 ರೂ.ನಗದು ಹಾಗೂ ಟ್ರೋಫಿ ವಿತರಿಸಲಾಯಿತು. ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಗೌಡ ಮಹಿಳಾ ಒಕ್ಕೂಟ ಚೆರಂಬಾಣೆ ಪ್ರಶಸ್ತಿಗೆ ಬಾಜನವಾಯಿತು. ಈ ತಂಡಕ್ಕೆ 15000 ರೂ.ನಗದು ಹಾಗೂ ಟ್ರೋಫಿ ವಿತರಿಸಲಾಯಿತು.ಬಲಮುರಿಯ ಮಹದೇವ ಸ್ಪೋಟ್ರ್ಸ್ ಕ್ಲ ಬ್ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.ಈ ತಂಡ 10000 ರೂ.ನಗದು ಹಾಗೂ ಟ್ರೋಫಿ ತನ್ನದಾಗಿಸಿಕೊಂಡಿತು. ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಸಿದ್ದಾಪುರದ ಗ್ಯಾಲಕ್ಸಿ ನಲ್ವತೆಕ್ಕರೆ ತಂಡಮುಡಿಗೇರಿಸಿಕೊಂಡರೆ ಹಾಕತ್ತೂರಿನ ಅಟ್ಯಾಕ್ ಬಾಯ್ಸ್ ತಂಡ ದ್ವಿತೀಯ ಸ್ಥಾನ ಗಳಿಸಿತು. ವಿಜೇತ ತಂಡಕ್ಕೆ 33,333 ರೂ ನಗದು ಮತ್ತು ಆಕರ್ಷಕ ಟ್ರೋಫಿ ರನ್ನರ್ ಅಪ್ ತಂಡಕ್ಕೆ 15555 ರೂ ನಗದು ಹಾಗೂ ಆಕರ್ಷಕ ಟ್ರೋಫಿ ವಿತರಿಸಲಾಯಿತು, ತೃತೀಯ ಸ್ಥಾನವನ್ನು ಜಂಟಿ ವಿಜೇತರಾಗಿ ಕೊಂಡಂಗೇರಿ ತಂಡ ಹಾಗೂ ಅಯ್ಯಂಗೇರಿ ಫ್ರೆಂಡ್ಸ್ ತಂಡ ಪಡೆದುಕೊಂಡಿತು. ಕಾರ್ಯಕ್ರಮದಲ್ಲಿ ಗಣ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು. ಮ್ಯಾನ್ ಆಫ್ ದ ಸೀರೀಸ್ : ಚಿಂಚು ನಲ್ವತೆಕ್ಕರೆ, ಬೆಸ್ಟ್ ಬ್ಯಾಟ್ಸ್ ಮ್ಯಾನ್ : ಸಾಹುಲ್ ನಲ್ವತೆಕ್ಕರೆ, ಬೆಸ್ಟ್ ಬೌಲರ್ : ರಫೀಕ್

ವರದಿ : ದುಗ್ಗಳ ಸದಾನಂದ. 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.