ವಿರಾಜಪೇಟೆ ನ.25 NEWS DESK : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕ ಹಾಗೂ ಡಾ. ಅಗರ್ವಾಲ್ಸ್ ಕ್ಲಿನಿಕ್ ನ ಸಹಯೋಗದಲ್ಲಿ ನ.29 ರಂದು ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಬೇಟೋಳಿ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾಗಿದೆ. ಶಿಬಿರವು ಬೆಳಿಗ್ಗೆ 10 ಗಂಟೆಗೆ ಆರಂಭವಾಗಿ ಸಂಜೆ 4 ಗಂಟೆಗೆಯ ವರೆಗೆ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಬೇಟೋಳಿ ಪಂಚಾಯತ್ ಪ್ರಕಟಣೆಯಲ್ಲಿ ಕೋರಿದೆ.










