

ಕುಶಾಲನಗರ ನ.26 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಗ್ರಾಮಸಭೆಯು ನ.28 ರಂದು ಪಂಚಾಯಿತಿ ಮಾರುಕಟ್ಟೆ ಸಭಾಂಗಣದಲ್ಲಿ ನಡೆಯಲಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಡಿ.ಬಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಗ್ರಾಮ ಸಭೆಗೆ ಹಾಜರಾಗುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ.










