ಮಡಿಕೇರಿ ನ.26 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಕಬ್ಸ್, ಬುಲ್ ಬುಲ್ಸ್,, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೇಂಜರ್ಸ್ ಮತ್ತು ರೋವರ್ಸ್ ವಿದ್ಯಾರ್ಥಿಗಳಿಗೆ ಮಡಿಕೇರಿ ನಗರದ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ
ಏರ್ಪಡಿಸಿದ್ದ ಮೈಸೂರು ವಿಭಾಗಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಸ್ಪರ್ಧೆಗೆ ವಿಜೇತಗೊಂಡವರ ವಿವರ :: ಸೈಟ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಮೂಡಬಿದರೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಕ್ರೆಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರೌಡಶಾಲೆ ಕಾರ್ಕಳ ದ್ವಿತೀಯ ಹಾಗೂ ಹಾಗೂ ಮಾದರಿ ಆಂಗ್ಲ ಪ್ರೌಡ ಶಾಲೆ ಚಿಕ್ಕಮಂಗಳೂರು ಜಿಲ್ಲೆ ತೃತೀಯ ಸ್ಥಾನ ಪಡೆದುಕೊಂಡಿದೆ. ಕಬ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಮೂಡಬಿದರೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಮಾದವ ಕೃಪ ಶಾಲೆ ಮಣಿಪಾಲ್ ಉಡುಪಿ ಜಿಲ್ಲೆ ದ್ವಿತೀಯ, ರೋಟರಿ ಶಾಲೆ ಹಾರ್‍ಬಲ್ಲಿ ಹಾಸನ ತೃತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಗೈಡ್ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಡಶಾಲೆ) ಸುಳ್ಯ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಮಿಲಾ ಗ್ರೀಸ್ ಪ್ರೌಢಶಾಲೆ ಕಲ್ಯಾಣ ಪುರ ಉಡುಪಿ ಜಿಲ್ಲೆ ದ್ವಿತೀಯ, ಜೆಎಸ್‍ಎಸ್ ಪಬ್ಲಿಕ್ ಶಾಲೆ ಸಿದ್ಧಾರ್ಥ್ ನಗರ ಮೈಸೂರು ತೃತೀಯ ಸ್ಥಾನ ಪಡೆದುಕೊಂಡಿದೆ. ರೋವರ್ ವಿಭಾಗದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜು ಭಾಗಮಂಡಲ ಕೊಡಗು ಜಿಲ್ಲೆ ದ್ವಿತೀಯ, ಸಂತ ಜೋಸೆಫ್ ಪದವಿ ಪೂರ್ವ ಕಾಲೇಜು ಜ್ಯೋತಿ ನಗರ ಚಿಕ್ಕಮಂಗಳೂರು ಜಿಲ್ಲೆ ತೃತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ರೇಂಜರ್ ವಿಭಾಗದಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಸರಕಾರಿ ಪದವಿ ಪೂರ್ವ ಕಾಲೇಜು ಸಂದೂರು ಕಾರ್ಕಳ ಉಡುಪಿ ಜಿಲ್ಲೆ ದ್ವಿತೀಯ, ಡಿಎಸ್‍ಬಿ.ಗಿ.ಪದವಿ ಪೂರ್ವ ಕಾಲೇಜು ಮೂಡಿಗೆರೆ, ಚಿಕ್ಕಮಂಗಳೂರು ತೃತೀಯ ಸ್ಥಾನ ಪಡೆದುಕೊಂಡಿದೆ. ವಿಜೇತ ತಂಡಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಟಕದ ವತಿಯಿಂದ ಜ.10 ಮತ್ತು 11 ರಂದು ಬಳ್ಳಾರಿ ನಗರದಲ್ಲಿ ನಡೆಯಲಿರುವ ರಾಜ್ಯಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ವಿಭಾಗಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಆಯ್ಕೆಗೊಂಡ ತಂಡಗಳು ಭಾಗವಹಿಸಲಿವೆ.












