ಮಡಿಕೇರಿ ನ.26 NEWS DESK : ಅಪಘಾತದಲ್ಲಿ ಸಾವನ್ನಪ್ಪಿದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಂತಾಪ ಸೂಚಿಸಿದ್ದಾರೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಸುದ್ದಿ ತಿಳಿದು ಅತ್ಯಂತ ದುಃಖವನ್ನುಂಟುಮಾಡಿದೆ. ರಾಜ್ಯದ ಆಡಳಿತ ವ್ಯವಸ್ಥೆಯ ಹಲವು ಜಿಲ್ಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಾ, ಜನಮಾನಸದಲ್ಲಿ ಉತ್ತಮ ವ್ಯಕ್ತಿಯಾಗಿದ್ದ ಇವರ ಅಗಲಿಕೆಯು ರಾಜ್ಯದ ಜನತೆಗೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತಾ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಆ ಭಗವಂತ ಅವರ ಕುಟುಂಬದವರಿಗೆ ಹಾಗೂ ಅವರ ಬಂಧು-ಬಳಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.










