ಮೈಸೂರು, ನ.26 NEWS DESK : ಸಂಸದರ ಕ್ರೀಡಾ ಮಹೋತ್ಸವದ ಅಂಗವಾಗಿ ಫಿಟ್ ಯುವ ಫಾರ್ ವಿಕಸಿತ್ ಭಾರತದ ಯೋಜನೆಯಡಿ ಮೈಸೂರಿನಲ್ಲಿ ಈ ಬಾರಿ ವಿಶೇಷ ಕ್ರೀಡೆಯನ್ನು ಆಯೋಜಿಸಲಾಗಿದೆ. ಅತ್ಯಂತ ಪ್ರಾಚೀನ ಹಾಗೂ ಹಳ್ಳಿ ಸೊಗಡಿನ ಮತ್ತು ದೈಹಿಕ ಸಾಮರ್ಥ್ಯದ ಜೊತೆಗೆ ಚಾಣಾಕ್ಷತನವನ್ನೂ ಕೋರುವ “ಹಗ್ಗ-ಜಗ್ಗಾಟ” ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದೇ ನವೆಂಬರ್ 30ರ ಭಾನುವಾರದಂದು ಬೆಳಗ್ಗೆ 8 ಗಂಟೆಗೆ ಮೈಸೂರಿನ ವಿಶ್ವವಿದ್ಯಾಲಯದ ಓವಲ್ ಗ್ರೌಂಡ್‌ನಲ್ಲಿ ಈ ಕ್ರೀಡಾಕೂಟ ನಡೆಯಲಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್” ನೇತೃತ್ವದಲ್ಲಿ ಈ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಮೈಸೂರಿನಲ್ಲಿ ನಡೆಯಲಿರುವ ಹಗ್ಗ-ಜಗ್ಗಾಟ ಸ್ಪರ್ಧೆಯಲ್ಲಿ ಪುರುಷ-ಮಹಿಳೆಯರ ತಂಡಗಳು ಭಾಗವಹಿಸಬಹುದಾಗಿದೆ. ಪ್ರತಿ ತಂಡದಲ್ಲಿ ಕನಿಷ್ಠ 8 ಮಂದಿ ಇರಬೇಕಾಗಿದೆ. ಪುರುಷರಿಗೆ 560 ಕೆಜಿಗಿಂತ ಕಡಿಮೆ, 640 ಕೆಜಿಗಿಂತ ಕಡಿಮೆ ಹಾಗೂ 720 ಕೆಜಿಗಿಂತ ಕಡಿಮೆ ತೂಕದ ವಿಭಾಗ ಹಾಗೂ ಮಹಿಳೆಯರ ವಿಭಾಗದಲ್ಲಿ 500 ಕೆಜಿಗಿಂತ ಕಡಿಮೆ ಹಾಗೂ 540 ಕೆಜಿ ಕಡಿಮೆ ತೂಕದ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಪ್ರತಿ ವಿಭಾಗದಲ್ಲಿ ವಿಜೇತ ತಂಡಗಳಿಗೆ ಟ್ರೋಫಿ ಹಾಗೂ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಗುವುದು.
:: ನೋಂದಣಿ :: ಈ ಕ್ರೀಡೆಯಲ್ಲಿ ಭಾಗವಹಿಸುವವರು ನವೆಂಬರ್ 29, ಸಂಜೆ 5 ಗಂಟೆಯೊಳಗೆ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿಗಾಗಿ ಹೆಚ್ಚಿನ ಮಾಹಿತಿಗಾಗಿ ಇವರನ್ನು ಸಂಪರ್ಕಿಸಬಹುದಾಗಿದೆ.
ಗೋಪಾಲರಾಜ್ ಅರಸ್ (9980763793)
ದಿನೇಶ್ ಗೌಡ (9901979899)
ಮಂಜು (9731505548)
ಫೈಟಿ ರವಿ (9986217441)
ರಾಕೇಶ್ ಭಟ್ (9916221184)











