ಮಡಿಕೇರಿ ನ.26 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಷಷ್ಠಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಮುಂಜಾನೆಯಿಂದ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು. ಮಧ್ಯಾಹ್ನ ಶ್ರೀ ಸುಬಹ್ಮಣ್ಯ ದೇವರ ಶ್ರೀ ಭೂತ ಬಲಿ(ಕ್ಷೇತ್ರ ಪ್ರದಕ್ಷಿಣೆ), ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ ನೆರವೇರಿತು. :: ದೈವಗಳ ವೆಳ್ಳಾಟಂ :: ಬೆಳಿಗ್ಗೆ ಶ್ರೀ ಕುಟ್ಟಿಚಾತನ್ ದೇವರ ವಳ್ಳಾಟಂ, ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಶ್ರೀ ಗುಳಿಗ ದೇವರ ವೆಳ್ಳಾಟಂ, ಶ್ರೀ ಪೋದಿ ದೇವರ ವೆಳ್ಳಾಟಂ ಜರುಗಿತು. ಸಂಜೆ 6 ಗಂಟೆಗೆ ಶ್ರೀ ಮುತ್ತಪ್ಪ ಮಹಿಳಾ ವೇದಿಕೆಯಿಂದ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 8 ಗಂಟೆಗೆ ಮಹಾಪೂಜೆಯ ನಂತರ ಪ್ರಸಾದ ವಿತರಣೆಯಾಗಲಿದೆ.











