ವಿರಾಜಪೇಟೆ ನ.27 NEWS DESK : ನಗರದ ತೆಲುಗರ ಬೀದಿಯಲ್ಲಿರುವ ಶ್ರೀ ಅಂಗಾಳ ಪರಮೇಶ್ವರಿ ದೇವಾಲಯದಲ್ಲಿ ಸುಬ್ರಹಣ್ಯ ಷಷ್ಠಿ ಪ್ರಯುಕ್ತ ನಾಗದೇವರ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ದೇವರಿಗೆ ಹಾಲಿನ ಅಭಿಷೇಕ, ವಿಶೇಷ ಪೂಜೆಗಳು ನಡೆಯಿತು. ತಂಬಿಲ ಸೇವೆ, ಕ್ಷೀರಾಭಿಷೇಕ, ಕುಂಕುಮಾರ್ಚನೆ ಮತ್ತು ಪುಷ್ಪಾರ್ಚನೆಯೊಂದಿಗೆ ಮಹಾ ಮಂಗಳಾರತಿಯನ್ನು ನೆರವೇರಿಸಲಾಯಿತು. ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಬಳಿಕ ಪ್ರಸಾದ ವಿತರಣೆ ಮಾಡಲಾಯಿತು. ಪೂಜೆಯ ಅಂಗವಾಗಿ ದೇವರನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ನಾಗನ ರೂಪ ಹೋಲುವಂತೆ ದೇವರ ಮೂರ್ತಿಗೆ ಅಲಂಕಾರ ಮಾಡಲಾಗಿತ್ತು. ನಗರದ ವಿವಿಧೆಡೆಯಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.











