ನಾಪೋಕ್ಲು ನ.27 NEWS DESK : ಪಾಲೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಷಷ್ಠಿ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಷಷ್ಠಿ ಹಬ್ಬದ ಪ್ರಯುಕ್ತ ದೇವಾಲಯದಲ್ಲಿ ನಾಗನ ಬನಕ್ಕೆ ರುದ್ರಾಭಿಷೇಕ, ಹಾಲು ಎಳೆ ನೀರು ಸೇರಿದಂತೆ ವಿವಿಧ ಅಭಿಷೇಕ ಸೇರಿದಂತೆ ವಿಶೇಷ ಪೂಜೆ ನೆರವೇರಿತು. ಮಧ್ಯಾಹ್ನ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, ಬಳಿಕ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಅರ್ಚಕ ಅರುಣ್ ಕುಮಾರ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ದೇವಾಲಯದ ಪಾರುಪತ್ಯಗಾರ ಟಿ.ಕೆ.ಮನು, ತಕ್ಕ ಮುಖ್ಯಸ್ಥರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.











