ವಿರಾಜಪೇಟೆ ನ.27 NEWS DESK : ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯ ಪ್ರತಿಜ್ಞೆಯನ್ನು ಭೋದಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸಂವಿಧಾನವು ಶ್ರೇಷ್ಠ ಕಾನೂನು ಆಗಿದ್ದು ಅದು ರಾಷ್ಟ್ರದ ಐಕ್ಯತೆಯ ಪ್ರತೀಕವಾಗಿದೆ. ಪ್ರಜೆಗಳಿಗೆ ಹಕ್ಕನ್ನು ನೀಡಿ ಕರ್ತವ್ಯವನ್ನು ಪಾಲಿಸಲು ನಿರ್ದೇಶನವನ್ನು ನೀಡುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನವೇ ಮೂಲಧಾರವಾಗಿದೆ ಎಂದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಮಾತನಾಡಿದರು. ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿ ಬಿ.ಎನ್.ಶಾಂತಿಭೂಷಣ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











