ವಿರಾಜಪೇಟೆ ನ.27 NEWS DESK : ಪೊನ್ನಂಪೇಟೆಯ ಸರ್ಕಾರಿ ಶಾಲೆಯಲ್ಲಿ 1994-1999 ಬ್ಯಾಚ್ ನ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ದೇವಗೇರಿ, ಗುರುಗಳು ಪ್ರತಿಯೊಬ್ಬರ ಜೀವನದಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತಾರೆ. ಗುರುಗಳ ಆಶೀರ್ವಾದದಿಂದ ಏನನ್ನು ಬೇಕಾದರೂ ಸಾಧಿಸಲು ಸಾಧ್ಯ. ಗುರುಗಳಿಗೆ ಗೌರವವನ್ನು ಸೂಚಿಸುದರ ಮೂಲಕ ಕಾರ್ಯಕ್ರಮವನ್ನು ಆಯೋಜಿಸಿರುವುದು ಗಮನಾರ್ಹ ಎಂದು ಹೇಳಿದರು. ಪೊನ್ನಂಪೇಟೆ ಸರ್ಕಾರಿ ಶಾಲೆಯ ಶಿಕ್ಷಕಿ ಅಂಬುಜ, ದೇವಕಿ ಹಾಗೂ ಶಾಂತಿ ಮಾತನಾಡಿ, ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಕರೆ ನೀಡಿದರು. ಕಾರ್ಯಕ್ರಮದಲ್ಲಿ 16 ಶಿಕ್ಷಕರುಗಳನ್ನು ಸನ್ಮಾನಿಸುವುದರ ಮೂಲಕ ಗುರುವಂದನೆಯನ್ನು ಸಲ್ಲಿಸಲಾಯಿತು. ಪೊನ್ನಂಪೇಟೆ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಚಂಗಪ್ಪ, ಪೊನ್ನಂಪೇಟೆ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ಎಸ್ ಡಿ ಎಂ ಸಿ ಸದಸ್ಯರಾದ ರಾಮಕೃಷ್ಣ, ಅನೀಶ್, ಸೌಕಾತಾಲಿ, ಪೊನ್ನಣ್ಣ, ಮಹಮದ್ ಆಲಿ, ಜೀಷ, ಶ್ರೀಜ ಮೊದಲಾದವರು ಹಾಜರಿದ್ದರು. ಅಬ್ದುಲ್ ಮುನೀರ್ ಸ್ವಾಗತಿಸಿದರು, ಶೈಲ ನಿರೂಪಿಸಿದರು, ಮಮತ ವಂದಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.











