ವಿರಾಜಪೇಟೆ ನ.27 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವಿರಾಜಪೇಟೆಯ ಕಾನೂರು ವಲಯದ ಕುಟ್ಟ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪುಷ್ಪಾ ಅವರು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ದೇಶ, ಪ್ರೌಢಾವಸ್ಥೆಯ ಮಕ್ಕಳು ಸಾಮಾಜಿಕವಾಗಿ, ಮಾನಸಿಕವಾಗಿ ಹೇಗೆ ಬಲಿಷ್ಟರಾಗಿರಬೇಕು ಎನ್ನುದರ ಕುರಿತು ಹಾಗೂ ದುಶ್ಚಟಗಳ ಬಗ್ಗೆ ಜಾಗೃತಿ ಮೂಡಿಸಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಧ್ಯಾಯರಾದ ದಿನೇಶ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕ ವೃಂದ, ಒಕ್ಕೂಟ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.











