ಮಡಿಕೇರಿ NEWS DESK ನ.27 : ಭಾಗಮಂಡಲದಲ್ಲಿ ನ.28 ರಂದು ಬೆಳಿಗ್ಗೆ 10.30 ಗಂಟೆಗೆ ಕೊಡವ ಮತ್ತು ಅಮ್ಮ ಕೊಡವ ಸಮಾಜದ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಲಿದೆ. ಕಾರ್ಯಕ್ರಮದಲ್ಲಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ವಿಧಾಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಮತ್ತಿತರ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ವಿರಾಜಪೇಟೆ ಮಂಡಲ ಬಿಜೆಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 2022-23ರ ಬಜೆಟ್ ನಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಅಂದು ಶಾಸಕರಾಗಿದ್ದ ಕೆ.ಜಿ.ಬೋಪಯ್ಯ ಅವರ ಮನವಿ ಮೇರೆಗೆ ಕೊಡವರ ಶ್ರೇಯೋಭಿವೃದ್ಧಿಗಾಗಿ 10 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದರು. ಇದರಲ್ಲಿ 1 ಕೋಟಿ ರೂ.ಗಳನ್ನು ಕೊಡವ ಮತ್ತು ಅಮ್ಮ ಕೊಡವ ಸಮಾಜದ ಸಮುದಾಯ ಭವನಕ್ಕೆ ಮೀಸಲಿರಿಸಲಾಗಿತ್ತು ಎಂದು ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ತಿಳಿಸಿದ್ದಾರೆ.










