ಮಡಿಕೇರಿ ನ.28 NEWS DESK : ಮಡಿಕೇರಿ ಕೊಡವ ಸಮಾಜ ವತಿಯಿಂದ ಆಯೋಜಿಸಿದ ಆಲ್ ಮರ ನಡ್’ಪ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭಾಗವಹಿಸಿ, ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣ ಬಳಿ ಇರುವ ಕೋಲ್ ಮಂದ್ ಜಾಗದಲ್ಲಿ ಆಲದ ಗಿಡ ನೆಟ್ಟರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ ಮಂಡುವಂಡ ಪಿ ಮುತ್ತಪ್ಪ, ಸದಸ್ಯರು ಪದಾಧಿಕಾರಿಗಳು, ನಾಪೋಕು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ತೆನ್ನಿರ ಮೈನಾ,ಆಹ್ವಾನಿತ ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.











