ಮಡಿಕೇರಿ ನ.28 NEWS DESK : ನಗರಸಭೆ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಪೌರಕಾರ್ಮಿಕರ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿ, ಪೌರ ಕಾರ್ಮಿಕರ ಕಾರ್ಯವೈಖರಿಯನ್ನು ಶ್ಲಾಘೀಸಿದರು. ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ನಾಮನಿರ್ದೇಶಿತ ಸದಸ್ಯರಾದ ಮುದ್ದುರಾಜ್, ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ, ನಗರಸಭಾ ಸದಸ್ಯರುಗಳು ಹಾಜರಿದ್ದರು.











