ಮಡಿಕೇರಿ ನ.28 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣಗೊಳ್ಳಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ನಗರದ ಐಟಿಐ ಕಾಲೇಜು ಬಳಿ ಸುಮಾರು 379 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿ, ಜಿಲ್ಲಾ ನ್ಯಾಯಾಲಯ ಬಳಿ ಸುಮಾರು 448 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಾಲಕಿಯರ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಕ್ರೀಡಾಂಗಣ ಬಳಿ ಸುಮಾರು 250 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕ್ರೀಡಾ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು, ಇಲಾಖಾ ಅಧಿಕಾರಿಗಳು ಹಾಜರಿದ್ದರು.











