ಮಡಿಕೇರಿ ನ.28 NEWS DESK : ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಆದ್ದರಿಂದ ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ಕರೆ ನೀಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕರ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಾಲಿಬಾಲ್, ಹಾಕಿ, ಬ್ಯಾಡ್ಮಿಂಟನ್ ಮುಂತಾದವುಗಳು ಅಂತರಾಷ್ಟ್ರೀಯ ಮಟ್ಟಕ್ಕೆ ತಲುಪುವುದು ಕೊಡಗು ಜಿಲ್ಲೆಯು ಒಂದಾಗಿದೆ. ಕೊಡಗು ಜಿಲ್ಲೆಯು ಕ್ರೀಡೆಯಲ್ಲಿ ಹೆಸರು ಮಾಡಿದೆ. ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿ ಎಂದರು. ನಿರಂತರವಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಆರೋಗ್ಯವನ್ನು ಉತ್ತಮವಾಗಿಡಲು ಸಾಧ್ಯ. ಹಾಗೂ ಪೋಷಕರು ಮಕ್ಕಳಿಗೆ ಪ್ರೋತ್ಸಾಹ ನೀಡುವುದು ಮುಖ್ಯ ಎಂದರು. ಕ್ರೀಡೆಗಳನ್ನು ನಿರಂತರವಾಗಿ ಅಭ್ಯಾಸ ಮಾಡಿದರೆ ದೊಡ್ಡಮಟ್ಟ ತಲುಪಲು ಸಾಧ್ಯ ಎಂದು ಹೇಳಿದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಂಟಿ ನಿರ್ದೇಶಕರಾದ ಸಿ.ಎಂ.ಮಹಾಲಿಂಗಯ್ಯ ಅವರು ಮಾತನಾಡಿ ಕ್ರೀಡೆಗಳಲ್ಲಿ ದೈಹಿಕ, ಮಾನಸಿಕ ಶಿಸ್ತು ಮತ್ತು ಜವಾಬ್ದಾರಿ ಚಟುವಟಿಕೆಗಳನ್ನು ಬೆಳೆಸಿಕೊಂಡರೆ ಆರೋಗ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು. ವಿದ್ಯಾರ್ಥಿಗಳು ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿದರೆ ಒಂದು ಕ್ರೀಡೆ ಮುಂದುವರೆಯಲು ಸಾಧ್ಯ ಮತ್ತು ಕೊಡಗು ಜಿಲ್ಲೆ ಕ್ರೀಡೆಗಳಿಗೆ ಹೆಸರು ಮಾಡಿರುವ ಜಿಲ್ಲೆ ಎಂದು ಹೇಳಿದರು. ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡೆಯ ಜ್ಯೋತಿ ಸೋಮಯ್ಯ ಅವರು ಮಾತನಾಡಿ ಗುರು ಹಿರಿಯರನ್ನು ಗೌರವಿಸುವುದು ಮತ್ತು ವಿನಯತೆ ಇದ್ದರೆ ಶಾಲೆಯ ಶಿಖರ ಏರಬಹುದು. ಹಾಗೂ ಸಮಾಜಕ್ಕೆ ಮಾದರಿಯಾಗಬಹುದು ಎಂದು ಹೇಳಿದರು. ರಾಜ್ಯಮಟ್ಟದ ಪಂದ್ಯಾವಳಿಯು ಕೊಡಗು ಜಿಲ್ಲೆಯಲ್ಲಿ ನಡೆಯುವುದು ಸಂತೋಷದ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಎಲ್.ಚಿದಾನಂದ ಕುಮಾರ್ ಅವರು ಮಾತನಾಡಿ ಒಳ್ಳೆ ಆಲೋಚನೆ ಬೆಳೆಸಿಕೊಂಡರೆ ಕ್ರೀಡೆಗಳಲ್ಲಿ ಮುಂದೆ ಬರಲು ಸಾಧ್ಯ. ಸೋಲು ಗೆಲುವು ಮುಖ್ಯವಲ್ಲ ಉತ್ತಮವಾಗಿ ಕ್ರೀಡೆಗಳಲ್ಲಿ ಬೆಳೆಸಿಕೊಳ್ಳುವುದು ಅಗತ್ಯ ಎಂದರು. ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಕೊ.ಜಿ.ಪ.ಪೂ.ಕಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಕೆ.ಸಿ.ಚಂದ್ರಶೇಖರ್, ಪ್ರಾಂಶುಪಾಲರು ಹಾಗೂ ಕೊ.ಜಿ.ಪ.ಪೂ.ಕಾ ಪ್ರಾಂಶುಪಾಲರುಗಳ ಸಂಘದ ಅಧ್ಯಕ್ಷರಾದ ಪಿ.ಎಂ.ದೇವಕಿ, ಕೊ.ಜಿ.ಪ.ಪೂ.ಕಾ ಪ್ರಾಂಶುಪಾಲರುಗಳ ಸಂಘದ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲರು ಎನ್.ಕೆ.ಜ್ಯೋತಿ, ಪ್ರಾಂಶುಪಾಲರು ಹಾಗೂ ಕೊ.ಜಿ.ಪ.ಪೂ.ಕಾ ಪ್ರಾಂಶುಪಾಲರುಗಳ ಸಂಘದ ಖಜಾಂಜಿ ವಿವಿಯನ್ ಅಂತೋಣಿ ಆಲ್ವಾರಿಸ್, ಚಂದ್ರಶೇಖರ್, ಕಾಂತರಾಜ್, ಗೋಪಾಲಕೃಷ್ಣ, ರಾಮಸ್ವಾಮಿ, ನಾಗರಾಜ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿ ವರ್ಗದವರು, ಪ್ರಾಂಶುಪಾಲರು ಮತ್ತು ಉಪನ್ಯಾಸಕರು, ಕೊಡುಗು ಜಿಲ್ಲಾ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ವಿದ್ಯಾರ್ಥಿಗಳು ಪೋಷಕರು ಇತರರು ಇದ್ದರು. ದಿವ್ಯ ಪ್ರಾರ್ಥಿಸಿದರು, ಸಂಸ್ಥೆಯ ವಿದ್ಯಾರ್ಥಿಗಳಿಂದ ವೃತ್ತ ಪ್ರದರ್ಶನ ಮಾಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್ ಸ್ವಾಗತಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇಂಗ್ಲೀμï ಉಪನ್ಯಾಸಕರಾದ ಸೋನ ಸೌದಮ್ಮ ನಿರೂಪಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕೆ.ಬಿ.ಗೌರಿ ವಂದಿಸಿದರು.











