ಮಡಿಕೇರಿ ನ.29 NEWS DESK : ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025-26ನೇ ಸಾಲಿನ ಸಾಮಾನ್ಯ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾ ಸಿಂಧು Sevasindhu.karnataka.gov.in ಮುಖಾಂತರ ದಿನಾಂಕ: 01-12-2025 ರಿಂದ ದಿನಾಂಕ: 30-12-2025 ರ ವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ ಕಸಂವಾ 280 ಕಸಧ 2024 (ಭಾಗ-1) ದಿನಾಂಕ: 31-10-2025 ರಲ್ಲಿನ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್ ಸೈಟ್: www.kannadasiri. karnataka.gov.in ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ 08024410547, 8792662814, 8792662816, 08022213530, 9986837037, 9900337738, 9448436877, 9480197511, 9916600027, 08022241325 ಅನ್ನು ಹಾಗೂ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಜಿಲ್ಲೆಯ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದು (ಸಮಯ: ಬೆಳಗ್ಗೆ 10 ರಿಂದ ಸಂಜೆ 6 ಗಂಟೆ) (ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ) ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.










