ಮಡಿಕೇರಿ ನ.29 NEWS DESK : ಸಮಸ್ತ ಉಲಮಾ ಸಂಘಟನೆಗೆ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಫೆ.4 ರಿಂದ 8ರ ವರೆಗೆ ‘ಆದರ್ಶ ಪರಿಶುದ್ಧತೆ ಶತಮಾನಗಳಿಂದ’ ಎಂಬ ಘೋಷಣೆಯೊಂದಿಗೆ ಕೇರಳದ ಕಾಸರಗೋಡುವಿನ ಕುಣಿಯಲ್ಲಿ 100ನೇ ಅಂತರರಾಷ್ಟ್ರೀಯ ಮಹಾ ಸಮ್ಮೇಳನ ನಡೆಯಲಿದೆ. ಇದರ ಪ್ರಚಾರಕ್ಕಾಗಿ ಕೊಡಗು ಜಿಲ್ಲಾ ಜಂಇಯ್ಯತುಲ್ ಉಲಮಾ ಒಕ್ಕೂಟದಿಂದ ಮಡಿಕೇರಿಯಲ್ಲಿ ‘ಸಮಸ್ತ ಶತಮಾನೋತ್ಸವ ಪ್ರಚಾರ ಮಹಾ ಸಮ್ಮೇಳನ’ವನ್ನು ಆಯೋಜಿಸಲಾಗಿದೆ. ನಗರದ ಗಾಂಧಿ ಮೈದಾನದಲ್ಲಿ ಪಿ.ಬಿ.ಇಸ್ಮಾಯಿಲ್ ಮುಸ್ಲಿಯಾರ್ ಕಲ್ಲುಬಾಣೆ ಅವರ ನೇತೃತ್ವದಲ್ಲಿ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂಜೆ 4 ಗಂಟೆಗೆ ಕೊಡಗು ಜಿಲ್ಲಾ ಉಲಮಾ ಒಕ್ಕೂಟದ ಅಧ್ಯಕ್ಷÀ ಎಂ.ಎಂ.ಅಬ್ದುಲ್ಲಾ ಫೈಝಿ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಸಮಸ್ತ ಕೇಂದ್ರೀಯ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷರೂ ಹಾಗೂ ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನೇತಾರರಾದ ಸಯ್ಯಿದುಲ್ ಉಲಮಾ ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.











