ಬೆಂಗಳೂರು ನ.29 NEWS DESK : ತೀವ್ರ ಕುತೂಹಲ ಕೆರಳಿಸಿದ ಇಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ನಂತರ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಿಎಂ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು. ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬ್ರೇಕ್ ಫಾಸ್ಟ್ ಚೆನ್ನಾಗಿತ್ತು, ನಾನು ಡಿ.ಕೆ.ಶಿವಕುಮಾರ್, ಪೊನ್ನಣ್ಣ ಬ್ರೇಕ್ ಫಾಸ್ಟ್ ಮಾಡಿದ್ವಿ. ಮೊನ್ನೆನೇ ಹೈಕಮಾಂಡ್ ಫೋನ್ ಮಾಡಿದ್ದರು. ಡಿ.ಕೆ.ಶಿವಕುಮಾರ್ ಇವತ್ತು ನಮ್ಮನೆಗೆ ಬಂದರು. ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆದಿದ್ದೆ. ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಯಿತು, ಅದನ್ನು ಬಗೆಹರಿಸಲು ಇಂದು ಕರೆದಿದ್ದೆ ಎಂದರು. ನಮ್ಮ ಉದ್ದೇಶ 2028ರ ವಿಧಾನಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು,ನನ್ನ ಮತ್ತು ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟ ಪಡಿಸಿದರು.










