ಮಡಿಕೇರಿ ನ.29 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನ.30 ರಂದು ಬೆಳಗ್ಗೆ 9.30 ಗಂಟೆಗೆ 2024 ನೇ ವರ್ಷದ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಡಾ.ಯು.ಟಿ.ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವರಾದ ಡಿ.ವಿ.ಸದಾನಂದ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕಸರಾದ ಡಾ.ಮಂತರ್ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ್ ಬಿ.ಗರುಡಾಚಾರ್, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಟಿ.ಎಚ್.ಎಂ.ಕುಮಾರ್, ನಿರ್ದೇಶಕರಾದ ಕೆ.ಎಂ.ಗಾಯತ್ರಿ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಕೆಂಚಪ್ಪ ಗೌಡ, ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ., ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಹರಪಳ್ಳಿ ರವೀಂದ್ರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ,. ಕೊಡಗು ಗೌಡ ಸಮಾಜದ ಅಧ್ಯಕ್ಷರಾದ ಕೇಕಡ ಎ.ನಾಣಯ್ಯ, ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷರಾದ ಪಾಣತ್ತಲೆ ಪಳಂಗಪ್ಪ, ದಕ್ಷಿಣ ಕನ್ನಡ ಗೌಡ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಪಿ.ಓಂಪ್ರಕಾಶ್, ಯಲಹಂಕ ಗೌಡ ಸಮಾಜದ ಅಧ್ಯಕ್ಷರಾದ ಕುಂಞಳಿ ಅಜೀತ್ ಕುಮಾರ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷರಾದ ಡಾ.ತೇನನ ರಾಜೇಶ್ ಇತರರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಅರೆಭಾಷೆ ಸಾಹಿತ್ಯ ಮತ್ತು ಶೈಕ್ಷಣಿಕ ಸೇವೆ ಕ್ಷೇತ್ರದಲ್ಲಿ ಕೆ.ಆರ್ ಗಂಗಾಧರ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಸೇವೆ ಕ್ಷೇತ್ರದಲ್ಲಿ ಯು.ಪಿ ಶಿವಾನಂದ, ಅರೆಭಾಷಿಕರ ಸಂಘಟನೆ ಮತ್ತು ಆಡಳಿತ ಸೇವೆ ಕ್ಷೇತ್ರದಲ್ಲಿ ಡಿ.ಎಸ್.ಆನಂದ ಅವರು 2024 ನೇ ವರ್ಷದ ಕರ್ನಾಟಕ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪಡೆಯಲಿದ್ದಾರೆ.











