ಕುಶಾಲನಗರ ನ.29 NEWS DESK : ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಸರಕಾರಿ ಬಸ್ ನಿಲ್ದಾಣ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕನ್ನಡ ರಾಜ್ಯೋತ್ಸವನ್ನು ಉದ್ಯಮಿ ಹಾಗೂ ಆಟೋ ಚಾಲಕರ ಸಂಘದ ಕಟ್ಟಡಕ್ಕೆ ಸ್ಥಳ ದಾನಿಗಳಾದ ವಿ.ಎನ್.ತೇಜಸ್ ನಾಗೇಶ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರತಿಯೊಬ್ಬರೂ ಕನ್ನಡ ಭಾಷೆ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕು. ಮನೆ ಮನದಲ್ಲಿ ಕನ್ನಡ ಭಾಷೆ ಬೆಳವಣಿಗೆಗೆ ಹೆಚ್ಚಿನ ಗಮನ ಹರಿಸಬೇಕು ಎಂದರು. ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಕೃಷ್ಣದರ್ಶನ್ ಅಧ್ಯಕ್ಷತೆ ವಹಿಸಿದ್ದರು. ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಗೌಡ, ಖಜಾಂಚಿ ಮುನೀರ್, ಮಾಜಿ ಕಾರ್ಯದರ್ಶಿ ಮೂರ್ತಿ, ಮಂಜು ಬೆಳ್ಳುಳ್ಳಿ, ಕಾರು ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಉದಯಕುಮಾರ್, ಲಾರಿ ಟ್ರಾನ್ಸ್ ಸ್ಪೋರ್ಟ್ಸ್ ಮಾಲೀಕರ ಸಂಘದ ಅಧ್ಯಕ್ಷ ಸಿ.ಕೆ.ಮಹೇಶ್, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಚ್ ಎಂ ರಘು ಮತ್ತಿತರರು ಪಾಲ್ಗೊಂಡಿದ್ದರು. ಮೈಸೂರು ನಾರಾಯಣ ಆಸ್ಪತ್ರೆಯ ವೈದ್ಯರಾದ ಡಾ.ಪೂರ್ಣಿಮಾ ನೇತೃತ್ವದಲ್ಲಿ ಆಟೋ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಇಸಿಜಿ ಪರೀಕ್ಷೆ ನಡೆಸಲಾಯಿತು.











