ಮಡಿಕೇರಿ NEWS DESK ನ.30 : ಹೆಚ್ಚಿನ ಸಂಖ್ಯೆಯಲ್ಲಿರುವ ಒಕ್ಕಲಿಗ ಜನಾಂಗ ಬಾಂಧವರು ಸಂಘಟಿತರಾಗಿ ಗುರುತಿಸಿಕೊಳ್ಳಲು ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವವನ್ನು ಪಡೆದುಕೊಳ್ಳುವಂತೆ ಕುಶಾಲನಗರ ತಾಲ್ಲೂಕು ಒಕ್ಕಲಿಗರ ಸಂಘದ ಖಜಾಂಚಿ ಅರುಣ್ ಚಂಗಪ್ಪ ಮನವಿ ಮಾಡಿದ್ದಾರೆ.
ಅರ್ಜಿ ಸಲ್ಲಿಸಲು ಡಿ.10 ಕೊನೆಯ ದಿನವಾಗಿದ್ದು, ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವದ ಅರ್ಜಿಗಳನ್ನು ನಾಡಪ್ರಭು ಪತ್ತಿನ ಬ್ಯಾಂಕ್, ಕುಶಾಲನಗರ, ಡಿ.ಸಿ.ಸಿ ಬ್ಯಾಂಕ್‌ನ ಜಿಲ್ಲಾ ಮತ್ತು ತಾಲ್ಲೂಕು ಶಾಖೆಗಳಲ್ಲಿ ವಿತರಿಸಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಕ್ಕಲಿಗ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಆದರೆ ಸಂಘಟಿತರಾಗಿ ಗುರುತಿಸಿಕೊಳ್ಳುವ ಪ್ರಮಾಣ ತುಂಬಾ ಕಡಿಮೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಸದಸ್ಯತ್ವ ಪಡೆಯುವ ಮೂಲಕ ಒಕ್ಕಲಿಗ ಸಮುದಾಯದ ಶಕ್ತಿಯನ್ನು ಹೆಚ್ಚಿಸಲು ಮುಂದಾಗಬೇಕೆAದು ಕರೆ ನೀಡಿದ್ದಾರೆ. ನಿಗಧಿತ ದಿನಾಂಕದೊಳಗೆ ಸದಸ್ಯತ್ವ ಶುಲ್ಕ ಪಾವತಿಸಿ ಅರ್ಜಿ ಪಡೆಯಬೇಕು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಬAಧಿಸಿದ ಬ್ಯಾಂಕ್ ಶಾಖೆಗೆ ಸಲ್ಲಿಸಬೇಕು ಎಂದು ಅರುಣ್ ಚಂಗಪ್ಪ ಹೇಳಿದ್ದಾರೆ.










