
ಗೋಣಿಕೊಪ್ಪ ಡಿ.1 NEWS DESK : ವಿರಾಜಪೇಟೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಯ ಮುಖ್ಯ ಶುಶ್ರೂಷಾಧಿಕಾರಿಯಾಗಿರುವ ಇಂದಿರಾವತಿ ಎಂ.ಬಿ ಅವರು ಫ್ಲಾರೆನ್ಸ್ ನೈಟಿಂಗೇಲ್ ನರ್ಸ್ ಪ್ರಶಸ್ತಿ -2025 ಪಡೆದುಕೊಂಡಿದ್ದಾರೆ. ಬೆಂಗಳೂರಿನ ಕರ್ನಾಟಕ ಸುದ್ದಿ ಸಂಘ” ಮತ್ತು “ಭಾರತದ ರಾಷ್ಟ್ರೀಯ ಪತ್ರಿಕಾ ಮಂಡಳಿ” ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆ ನೀಡುವ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್‌ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಮೂರ್ನಾಡಿನ ಅವಂದೂರು ಗ್ರಾಮದ ಶಾಸ್ತ್ರಿ ನಗರದ ನಿವಾಸಿ, ಮೊಟೇರ ಜಯರಾಮ್ ಅವರ ಧರ್ಮ ಪತ್ನಿಯಾಗಿದ್ದಾರೆ.








