Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ಏಡ್ಸ್ ಕುರಿತು ಜಾಗೃತಿ : ಏಡ್ಸ್ ನಿಮೂರ್ಲನೆಗೆ ಯುವ ಜನತೆ ಪಾತ್ರ ಮುಖ್ಯ : ಮೇಜರ್ ಪ್ರೊ.ರಾಘವ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ಏಡ್ಸ್ ಕುರಿತು ಜಾಗೃತಿ : ಏಡ್ಸ್ ನಿಮೂರ್ಲನೆಗೆ ಯುವ ಜನತೆ ಪಾತ್ರ ಮುಖ್ಯ : ಮೇಜರ್ ಪ್ರೊ.ರಾಘವ*

December 1, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.1 NEWS DESK : ಏಡ್ಸ್ ನಿಮೂರ್ಲನೆಗೆ ಯುವ ಜನತೆ ಪಾತ್ರ ಮುಖ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಲಯನ್ಸ್ ಸಂಸ್ಥೆ, ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿ, ಎಫ್‍ಎಂಕೆಎಂಸಿ ಕಾಲೇಜು, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಮಡಿಕೇರಿ, ಓಡಿಪಿ-ಸ್ನೇಹಾಶ್ರಯ ಸಮಿತಿ, ಚೈತನ್ಯ ನೆಟ್‍ವರ್ಕ್ ಕೊಡಗು ಹಾಗೂ ಆಶೋದಯ ಸಮಿತಿ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಏಡ್ಸ್ ದಿನ’ ಕಾರ್ಯಕ್ರಮ ನಡೆಯಿತು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಚ್‌ಐವಿ ಏಡ್ಸ್ ದೂರವಿರಲು ಸ್ವಯಂ ನಿಯಂತ್ರಣ ಹಾಗೂ ತಾಳ್ಮೆ ಅತೀ ಮುಖ್ಯ ಎಂದು ಅಭಿಪ್ರಾಯಪಟ್ಟರು. ಸ್ವಯಂ ಶಿಸ್ತು ಇದ್ದಲ್ಲಿ ಯಾವುದೇ ರೋಗಗಳು ಬರುವುದಿಲ್ಲ. ಹಲವು ತಪ್ಪುಗಳಿಂದ ಹಲವು ರೋಗಗಳಿಗೆ ಆಹ್ವಾನ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು. ಯುವ ಜನರು ಹಾದಿ ತಪ್ಪಿದರೆ ಇಡೀ ಸಮಾಜ ಹದಗೆಡುತ್ತದೆ. ಆದ್ದರಿಂದ ಮನಃ ಪರಿವರ್ತನೆ ಮಾಡಿಕೊಂಡು ಸುಸ್ಥಿರ ಜೀವನ ನಡೆಸುವಂತಾಗಬೇಕು ಎಂದು ಸಲಹೆ ನೀಡಿದರು. ಯಾವುದೇ ಕಾರಣಕ್ಕೂ ಸ್ವೇಚ್ಚಾಚಾರ ನಡೆಯದೆ ಮತ್ತೊಬ್ಬರಿಗೆ ಮಾದರಿಯಾಗಿ ನಡೆದುಕೊಂಡಾಗ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದರು. ಹೆಚ್‍ಐವಿ ಏಡ್ಸ್ ನಂತಹ ಮಾರಕ ರೋಗಗಳು ಬರಲು ಸಮಾಜದಲ್ಲಿ ಹಲವು ಕಾರಣಗಳು ಇರುತ್ತವೆ. ಆ ನಿಟ್ಟಿನಲ್ಲಿ ಯಾವುದೇ ರೀತಿಯ ಚಟಕ್ಕೆ ತುತ್ತಾಗದೆ ಸಮಾಜದಲ್ಲಿ ಪರಿವರ್ತನೆ ತರಲು ಮುಂದಾಗಬೇಕು ಎಂದು ರಾಘವ ಅವರು ಹೇಳಿದರು. ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಬಿ.ಕೆ.ರವೀಂದ್ರ ರೈ ಅವರು ಮಾತನಾಡಿ ಹೆಚ್‍ಐವಿ ಏಡ್ಸ್ ಸೋಂಕಿತರು ಸಮಾಜದಲ್ಲಿ ಆಗುತ್ತಿರುವ ಆಗುಹೋಗುಗಳ ಬಗ್ಗೆ ನಾವೆಲ್ಲ ತಿಳಿಯುವ ಒಂದು ಅವಕಾಶ ವಿಶ್ವ ಏಡ್ಸ್ ದಿನ. ಕಳೆದ ಹತ್ತಾರು ವರ್ಷಗಳಿಂದ ಪ್ರತೀ ವರ್ಷ ಡಿ.1 ರಂದು ವಿಶ್ವದಾದ್ಯಂತ ವಿಶ್ವ ಏಡ್ಸ್ ದಿನ ಆಯೋಜಿಸುತ್ತಾ ಬರಲಾಗುತ್ತಿದೆ. ಸೋಂಕಿತರಿಗೆ ಸಂಬಂಧಿಸಿದ ಮಾಹಿತಿ ತಿಳಿದವರು ಇತರರಿಗೆ ತಿಳಿಸುವ ಸದಾವಕಾಶದ ದಿನ ಇದು ಎಂದರು. ಲಯನ್ಸ್ ಟ್ರಸ್ಟ್ ಅಧ್ಯಕ್ಷರಾದ ಅಂಬೆಕಲ್ಲು ನವೀನ್ ಮಾತನಾಡಿ, ಆರೋಗ್ಯ ಮಾನವನ ಹಕ್ಕು ಪ್ರತಿಯೊಬ್ಬರಿಗೂ ಆರೋಗ್ಯ ಸೇವೆಗಳನ್ನು ಪಡೆಯುವ ಹಕ್ಕಿದೆ. ಅದರಂತೆ ಎಚ್‍ಐವಿ ಸೋಂಕಿತರಿಗೆ ಯಾವುದೇ ಕಳಂಕ ತಾರತಮ್ಯ, ಲಿಂಗ ಭೇದ, ಎಚ್‍ಐವಿ ಸ್ಥಿತಿ ಇತ್ಯಾದಿಗಳನ್ನು ಪರಿಗಣಿಸದೆ ಎಲ್ಲಾ ಆರೋಗ್ಯ ಸೇವೆಗಳು-ಎಚ್‍ಐವಿ ತಡೆ ಚಿಕಿತ್ಸೆ ಮತ್ತು ಆರೈಕೆ ಸೇವೆಗಳನ್ನು ಒದಗಿಸುವುದು. ಅವರಿಗೂ ಕೂಡ ಎಲ್ಲಾ ಆರೋಗ್ಯದ ಸೇವೆಗಳನ್ನು ಪಡೆಯುವ ಹಕ್ಕಿದೆ ಎಂದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳಿ ಪ್ರಾರಂಭವಾದ ವಿಶ್ವ ಏಡ್ಸ್ ದಿನದ ಜಾಥಗೆ ಚಾಲನೆ ನೀಡಿ ಮಾತನಾಡಿದ ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿ.ಸುರೇಂದ್ರ ಅವರು ಹೆಚ್‍ಐವಿ ಏಡ್ಸ್ ಹರಡುವ ಹಾಗೂ ನಿಯಂತ್ರಣ ಕುರಿತು ಎಲ್ಲರೂ ತಿಳಿದುಕೊಳ್ಳಬೇಕು. ಎಚ್‍ಐವಿ ಏಡ್ಸ್ ನಿಯಂತ್ರಣ ಎಲ್ಲರ ಜವಾಬ್ದಾರಿ ಎಂದು ಅರಿತುಕೊಳ್ಳೋಣ ಎಂದು ನುಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಮಾತನಾಡಿ, ಕಾನೂನು ಸೇವಾ ಪ್ರಾಧಿಕಾರದಿಂದ ಹಲವು ರೀತಿಯ ಕಾನೂನು ಸೇವೆಗಳಿದ್ದು, ನೆರವು ಸಿಗಲಿದೆ ಎಂದು ಹೇಳಿದರು. ರೋಟರಿ ಮಿಸ್ಟಿ ಹಿಲ್ಸ್ ಸಂಸ್ಥೆಯ ಅಧ್ಯಕ್ಷರಾದ ರತ್ನಾಕರ ರೈ ಅವರು ಮಾತನಾಡಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ಟ್ ಸಾಲ್ಡನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸುನಿತಾ, ಇತರರು ಇದ್ದರು. ‘ಕೊಡಗು ಜಿಲ್ಲೆಯಲ್ಲಿ 2025-26 ನೇ ಸಾಲಿನಲ್ಲಿ 61 ಎಚ್‍ಐವಿ ಏಡ್ಸ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಎಚ್‍ಐವಿ ಏಡ್ಸ್ ಸಂಬಂಧಿಸಿದಂತೆ ಉಚಿತ ಸಹಾಯವಾಣಿ 1097 ಸಂಖ್ಯೆಗೆ ಕರೆ ಮಾಹಿತಿ ಪಡೆಯಬಹುದಾಗಿದೆ ಎಂದು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ಹೇಳಿದರು.’ ಅತ್ಯುತ್ತಮ ರೆಡ್‍ರಿಬ್ಬನ್ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಎನ್‍ಎಸ್‍ಎಸ್ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ನಗರದ ಎಫ್‍ಎಂಸಿ ಕಾಲೇಜು, ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾವೇರಿ ಕಾಲೇಜು, ಗೋಣಿಕೊಪ್ಪ ಕಾವೇರಿ ಕಾಲೇಜು, ಸೋಮವಾರಪೇಟೆ ಸಂತ ಜೋಸೆಫರ ಪದವಿ ಕಾಲೇಜು ಈ ಕಾಲೇಜಿನ ಪ್ರತಿನಿಧಿಗಳನ್ನು ಗೌರವಿಸಲಾಯಿತು. ಜಾಥವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳಿ ಆರಂಭವಾಗಿ ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಮಂಗೇರಿರ ಮುತ್ತಣ್ಣ ವೃತ್ತ ಮೂಲಕ ಸಾಗಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವರೆಗೆ ಜಾಥ ನಡೆಯಿತು. ಜಾಥದಲ್ಲಿ ಹಲವು ಪದವಿ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡು ಎಚ್‍ಐವಿ ಏಡ್ಸ್ ನಿಯಂತ್ರಣ ಬಗ್ಗೆ ಜಾಗೃತಿ ಮೂಡಿಸಿದರು.

 

 

 

 

Share. Facebook Twitter Pinterest LinkedIn Tumblr Email WhatsApp
Previous Article*ಎಲ್ಲರೂ ಕ್ರೀಡೆಯಲ್ಲಿ ಭಾಗಿಯಾಗಿ ಆರೋಗ್ಯ ಕಾಪಾಡಿಕೊಳ್ಳಿ: ಸಂಸದ ಯದುವೀರ್‌ ಒಡೆಯರ್‌ ಕರೆ*
Next Article ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ : ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.