
ಮಡಿಕೇರಿ ಡಿ.1 NEWS DESK : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶಾಖಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ಮಂಜುನಾಥ್ ಅವರನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.








