
ಮಡಿಕೇರಿ ಡಿ.2 NEWS DESK : ಕರ್ನಾಟಕ ಬರಪೀಡಿತ ಜಿಲ್ಲೆಗಳಲ್ಲಿ, ಪರ ಮತ್ತು ಉಷ್ಣತಾಳುವ ಮೆಕ್ಕೆಜೋಳ ಮತ್ತು ಸುಧಾರಿತ ಕೃಷಿ ಪದ್ಧತಿಗಳ ವಿಸ್ತರಣೆ ಕುರಿತು ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ತಜ್ಞರ ತಂಡ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು. ಇದೆ ಸಂದರ್ಭದಲ್ಲಿ ಸಚಿವರೊಂದಿಗೆ ಕ್ಷೇತ್ರಕ್ಕೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು.









